ಅಪರಾಧ ಸಿನಿಮಾ ಸುದ್ದಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ

Share It

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈತ ಡಿಜಿಟಲ್ ಸಾಕ್ಷ್ಯಗಳ ನಾಶಕ್ಕೆ ಪ್ರಯತ್ನಿಸುತ್ತಿದ್ದ ಎನ್ನಲಾಗಿದೆ.

ಚಿತ್ರದುರ್ಗದಿಂದ ಕರೆತಂದು ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ನಾಲ್ಕು ಜನರನ್ನು ಸೆರೆಂಡರ್ ಮಾಡಿಸಿ, ಉಳಿದವರು ಎಸ್ಕೇಪ್ ಆಗಲು ಪ್ರಯತ್ನ ಮಾಡಿದ್ದರು. ಈ ವೇಳೆ ತಮ್ಮ ವಾಟ್ಸಾಪ್ ಮೆಜೇಸ್, ಕಾಲ್ ರೆಕಾರ್ಡ್ ಸೇರಿ ವಿವಿಧ ಡಿಜಿಟಲ್ ಸಾಕ್ಷ್ಯಗಳು ಸಿಗದಂತೆ ಆರೋಪಿಯ ನೆರವು ಕೋರಿದ್ದರು.

ಡಿಜಿಟಲ್ ಸಾಕ್ಷ್ಯ ನಾಶ ಮಾಡಿಕೊಡಲು ಆತನಿಗೆ ಲಕ್ಷಾಂತರ ರುಪಾಯಿ ಹಣವನ್ನು ಆರೋಪಿಗಳು ನೀಡಿದ್ದು, ಅದರಂತೆ ಆತ ಕೆಲವೊಂದು ಮಹತ್ವದ ಸಾಕ್ಷ್ಯಗಳನ್ನು ನಾಶಪಡಿಸಲು ಸಹಕಾರ ನೀಡಿದ್ದ ಎನ್ನಲಾಗಿದೆ. ವಿಚಾರಣೆ ವೇಳೆ ಸಾಕ್ಷ್ಯ ನಾಶಕ್ಕೆ ಸಹಕಾರ ನೀಡಿದ ವ್ಯಕ್ತಿಯ ಹೆಸರನ್ನು ಆರೋಪಿಗಳು ಬಾಯ್ಬಿಟ್ಟಿದ್ದು, ಇದೇ ಆಧಾರದಲ್ಲಿ ಆತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.


Share It

You cannot copy content of this page