ಅಪರಾಧ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಬಂಧಿತ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

Share It

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ 17 ಜನ ಆರೋಪಿಗಳ ಪೈಕಿ 4 ಆರೋಪಿಗಳನ್ನು ಭದ್ರತಾ ದೃಷ್ಟಿಯಿಂದ ತುಮಕೂರು ಜಿಲ್ಲೆಯ ಕಾರಾಗೃಹಕ್ಕೆ ಶಿಫ್ಟ್ ಮಾಡಲು ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಮೊರೆ ಹೋಗಿದ್ದರು.

ಇದೀಗ 24ನೇ ಎಸಿಎಂಎಂ ಕೋರ್ಟ್ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ 4 ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಅನುಮತಿ ನೀಡಿದೆ. ರವಿಶಂಕರ್, ಕೇಶವಮೂರ್ತಿ, ಕಾರ್ತಿಕ್ ಮತ್ತು ನಿಖಿಲ್ ಅವರನ್ನು ಇದೀಗ ಪೊಲೀಸರು ಕೋರ್ಟ್ ಅನುಮತಿ ಮೇರೆಗೆ ತುಮಕೂರು ಜೈಲಿಗೆ ಸ್ಥಳಾಂತರ ಮಾಡಿದ್ದಾರೆ.


Share It

You cannot copy content of this page