ಬೆಂಗಳೂರು: ರೇಣುಕಾಚಾರ್ಯ ಕೊಲೆ ಪ್ರಕರಣದ ವಿಚಾರಣೆ ಇಂದು ನ್ಯಾಯಾಲಯದ ಮುಂದೆ ಬಂದಿದ್ದು, ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು.
ಮಾಫಿ ಸಾಕ್ಷಿ ಮಾಡುವಂತೆ ಕೋರಿ ಪ್ರದೋಷ್ ಎಂಬಾತ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಯುತ್ತಿದ್ದು, ಅರ್ಜಿ ಸಂಬಂಧ ಸರಕಾರದ ಪರ ವಕೀಲರಾದ ಪ್ರಸನ್ನ ಕುಮಾರ್ ಅವರು ವಾದ ಮಂಡಿಸುತ್ತಿದ್ದಾರೆ.
ಸೆಕ್ಷನ್ 307 ಗೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಅವರು ವಿವರಣೆ ನೀಡುತ್ತಿದ್ದು, ಕ್ಷಮದಾನ ಕೊಡುವಾಗ ನ್ಯಾಯಾಧೀಶರು ಕೆಲವು ನಿಯಮಗಳನ್ನು ಅನುಸರಣೆ ಮಾಡಬೇಕು. ಹಿಂದಿನ ಹೈಕೋರ್ಟ್ ತೀರ್ಪಿನ ಅನ್ವಯ ಪರಿಶೀಲನೆ ನಡೆಸಬೇಕು ಎಂದು ವಾದ ಮಂಡಿಸಿದ್ದಾರೆ ಎನ್ನಲಾಗಿದೆ.
ಪ್ರದೋಷ್ ಮಾಫಿ ಸಾಕ್ಷಿಯಾಗಿಸುವಂತೆ ಕೋರಿಕೆ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಇದು ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ ಪ್ರಮುಖ ಆರೋಪಿಗಳಿಗೆ ಕಂಟಕವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

