ಬೆಂಗಳೂರು: ಗೆಳತಿ ಪವಿತ್ರಾ ಗೌಡ ಅವರಿಗೆ ಮೊಬೈಲ್ ಮೂಲಕ ಅಶ್ಲೀಲ ಮೆಸೇಜ್ ಮಾಡಿದ್ದ ಕಾರಣಕ್ಕೆ ಕೊಲೆಯಾಗಿದ್ದ ಚಿತ್ರದುರ್ಗ ಮೂಲದ ದರ್ಶನ್ ಅಭಿಮಾನಿ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ್, ನಟಿ ಪವಿತ್ರಾ ಗೌಡ ಸೇರಿ ಎಲ್ಲಾ 17 ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು.
ನಂತರ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಜಡ್ಜ್ ವಿಶ್ವನಾಥ್ ಸಿ. ಗೌಡರ್ ಅವರು ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ 17 ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದರು.
ಬಳಿಕ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ಪೊಲೀಸರು ನ್ಯಾಯಾಲಯದಿಂದ ಕರೆದೊಯ್ದರು.

