ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗೆಳತಿ ಹಾಗೂ ನಟಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ ನೀಡಬಹುದು ಎಂಬ ಆದೇಶಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ.
ದರ್ಶನ್ ಗೆಳತಿಗೆ ಮನೆ ಊಟ ನೀಡಬಹುದು ಎಂದು ೫೭ ನೇ ಸಿಸಿಎಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಸರಕಾರ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಸರಕಾರದ ಪರವಾಗಿ ತೀರ್ಪು ನೀಡಿದೆ. ಯಾವುದೇ ಕಾರಣಕ್ಕೂ ಮನೆ ಊಟ ನೀಡುವಂತಿಲ್ಲ ಎಂದು ಆದೇಶ ನೀಡಿದೆ.
ಸರಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಎಂ.ನಾಗಪ್ರಸನ್ನ ಅವರಿರುವ ಹೈಕೋರ್ಟ್ ಪೀಠ,
ವಿಶೇಷ ಸವಲತ್ತು ನೀಡಿದರೆ ಕ್ರಮ ಎಂಬ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿದ್ದು, ಎಷ್ಟೇ ದೊಡ್ಡವರಾದರೂ ಕಾನೂನು ಎಲ್ಲರಿಗೂ ಒಂದೇ ಎಂದು ತಿಳಿಸಿ, ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದ್ದಾರೆ.

