ಅಪರಾಧ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿಗಳ ಜಾಮೀನು ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ

Share It

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದು, ಜಾಮೀನು ಪಡೆದಿದ್ದ ಇನ್ನುಳಿದ ಆರೋಪಿಗಳ ಜಾಮೀನು ರದ್ದು ಕೋರಿ ಸರಕಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.

ಈಗಾಗಲೇ ಪ್ರಕರಣದಲ್ಲಿ ಜಾಮೀನು ಪಡೆದಿರುವ ಪುಟ್ಟಸ್ವಾಮಿ ಆಲಿಯಾಸ್ ಪವನ್, ಧನರಾಜ್, ನಂದೀಶ್ ಮತ್ತು ವಿನಯ್ ಅವರ ಬಗರದ 56 ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಸರಕಾರ ಮನವಿ ಮಾಡಿದೆ. ಅವರು ಡಿ.23, 2024 ರಂದು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ಪೀಠ, ಆರೋಪಿಗಳಿಗೆ ನೊಟೀಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು. ಪ್ರಕರಣ ಅತ್ಯಂತ ಹೀನವಾಗಿದ್ದು, ನಟ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹೀಗಾಗಿ, ಮತ್ತೇ ಜೈಲು ಸೇರಿದ್ದಾರೆ. ಆದರೆ, ಇನ್ನುಳಿದ ಆರೋಪಿಗಳು ಸೆಷನ್ಸ್ ನ್ಯಾಯಾಲಯದ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಆದೇಶ ಆಧರಿಸಿ, ನಾಲ್ವರು ಆರೋಪಿಗಳ ಜಾಮೀನು ರದ್ದುಗೊಳಿಸಬೇಕು ಎಂದು ಸರಕಾರದ ಪರ ವಕೀಲರು ವಾದ ಮಂಡಿಸಿದರು. ಅದಕ್ಕೆ ಉತ್ತರಿಸಿದ ನ್ಯಾಯಪೀಠ, ಸುಪ್ರೀಂ ಕೋರ್ಟ್ ಆದೇಶವಿರುವುದು ನಿಜ. ಆದರೆ, ಅರ್ಜಿದಾರರ ಜಾಮೀನು ರದ್ದುಗೊಳಿಸಬೇಕೆಂಬ ಪ್ಯಾಸಿಕ್ಯೂಷನ್ ಮನವಿಯ ಕುರಿತು ಪರಿಶೀಲನೆ ನಡೆಸಬೇಕಿದೆ. ಅರ್ಜಿ ಸಂಬAಧ ಆರೋಪಿಗಳ ಪರ ವಕೀಲರು ತಮ್ಮ ಆಕ್ಷೇಪಣೆ ಸಲ್ಲಿಸಲಿ ಎಂದು ಹೇಳಿತು.


Share It

You cannot copy content of this page