ಅಪರಾಧ ಸುದ್ದಿ

ರೌಡಿಶೀಟರ್ ಕೊಲೆ ಪ್ರಕರಣ : ಬೈರತಿ ಬಸವರಾಜ್ ಬಂಧನ

Share It

ಬೆಂಗಳೂರು: ರೌಡಿಶೀಟರ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಪೊಲೀಸರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಬೈರತಿ ಬಸವರಾಜ್ ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದರು. ಜಾಮೀನು ಹಿನ್ನೆಲೆಯಲ್ಲಿ ಶರಣಾಗುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಸೂಚನೆ ನೀಡಿದ್ದರು.


Share It

You cannot copy content of this page