ಅಪರಾಧ ಸುದ್ದಿ

ರೌಡಿ ಶೀಟರ್ ಹತ್ಯೆ ಪ್ರಕರಣ: ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬೈರತಿ ಬಸವರಾಜ್

Share It

ಬೆಂಗಳೂರು: ತಮ್ಮ ಮೇಲಿನ ಕೊಲೆ ಪ್ರಕರಣದ ಎಫ್‌ಐಆರ್ ರದ್ದು ಮಾಡುವಂತೆ ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಜು. 15ರಂದು ನಡೆದಿದ್ದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಪಾತ್ರವಿದೆ ಎಂದು ದೂರುದಾರರು ಆರೋಪಿಸಿದ್ದರು. ಪ್ರಕರಣದ ಪ್ರಮುಖ ಆರೋಪಿಯ ಜತೆಗೆ ಬೈರತಿ ಬಸವರಾಜ್ ನಿರಂತರ ಸಂಪರ್ಕದಲ್ಲಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಶುಕ್ರವಾರ ನ್ಯಾಯಾಲಯದಲ್ಲಿ ಬಸವರಾಜ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರ ಪಿಠಕ್ಕೆ ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಲಾಗಿತ್ತು. ಇದಕ್ಕೆ ಸರಕಾರಿ ಅಭೊಯೋಜಕರಾದ ಬಿ.ಎ.ಬೆಳ್ಳಿಯಪ್ಪ ಆಕ್ಷೇಪ ವ್ಯಕ್ತಪಡಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಕೋರಿ ಪೊಲೀಸರು ನೊಟೀಸ್ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೀಗಾಗಿ, ಅರ್ಜಿ ವಿಚಾರಣೆಗೆ ಪರಿಗಣಿಸಬೇಕಾದ ಅಗತ್ಯವಿರುವುದಿಲ್ಲ ಎಂದರು.


Share It

You cannot copy content of this page