ಸುದ್ದಿ

ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಸಂತೋಷ್ ಹೆಗಡೆಯವರ ಜೊತೆ ಯುವ ಸಂವಾದ

Share It

ಶಿವಮೊಗ್ಗ : ಯುವ ಸ್ಫೂರ್ತಿ ಅಕಾಡೆಮಿ ಚಿಕ್ಕಮಗಳೂರು, ವಿಸ್ತಾರ ನ್ಯೂಸ್ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಗಾಜನೂರು ಇವರ ಸಹಯೋಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಯುವ ಸ್ಫೂರ್ತಿ ಅಕಾಡೆಮಿಯ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳೊಂದಿಗೆ ಯುವ ಸಂವಾದ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸುಪ್ರೀಂ ಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿಗಳಾದ ಹಾಗೂ ಕರ್ನಾಟಕ ಲೋಕಾಯುಕ್ತದ ವಿಶ್ರಾಂತ ನ್ಯಾಯಮೂರ್ತಿಗಳಾದ ಶ್ರೀ ಎನ್.ಸಂತೋಷ್ ಹೆಗಡೆಯವರು ಆಗಮಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳೊಂದಿಗೆ ಯುವ ಸಂವಾದ ಕಾರ್ಯಕ್ರಮವನ್ನು ನಡೆಸಿದರು.

ಅವರ ಜೀವನದ ನೈಜ ಘಟನೆಗಳನ್ನು ಸ್ಮರಿಸುತ್ತಾ ಪ್ರಾಮಾಣಿಕತೆ ಹಾಗೂ ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಿಸಬೇಕಾದರೆ ವಿದ್ಯಾರ್ಥಿಗಳ ಪಾತ್ರ ಎಷ್ಟು ಮುಖ್ಯವಾಗುತ್ತದೆ ಎಂಬುದರ ಬಗ್ಗೆ ಸಂದೇಶವನ್ನು ನೀಡಿದರು ಹಾಗೂ ವಿದ್ಯಾ ಸಂಸ್ಥೆಯ ಮಕ್ಕಳ ಶಿಸ್ತಿನ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಮತ್ತೋರ್ವ ಅತಿಥಿಗಳಾದ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನ ಖ್ಯಾತ ನ್ಯಾಯವಾದಿಗಳಾದ ಶ್ರೀ ವಿಕ್ರಂ ಪಡ್ಕೆರವರು ನಿವೃತ್ತ ನ್ಯಾಯಮೂರ್ತಿಗಳ ಬಗ್ಗೆ ಕಿರುಪರಿಚಯವನ್ನು ಮಾಡುತ್ತಾ ಕಾನೂನಿನ ಅರಿವು ಮತ್ತು ಜಾಗೃತಿಯನ್ನು ಮೂಡಿಸುವ ಮಾತುಗಳಾನ್ನಾಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶಿವಮೊಗ್ಗದ ದೊಡ್ಡಮ್ಮ ದೇವಿ ಉಪಾಸಕರಾದ ಪೂಜ್ಯ ಶ್ರೀ ಸಿದ್ದಪ್ಪಾಜಿಯವರು ವಹಿಸಿದ್ದರು. ಚಿಕ್ಕಮಗಳೂರಿನ ಯುವಸ್ಪೂರ್ತಿ ಅಕಾಡೆಮಿಯ ಮುಖ್ಯಸ್ಥರಾದ ಶ್ರೀ ಸುಂದರೇಶ್.ಸಿ.ಬಿ.ರವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ವಿಶೇಷವಾದ ಯೋಗ ಪ್ರದರ್ಶನವನ್ನು ಸಾಗರದ ಕುಮಾರಿ ಪ್ರಜ್ಞಾರವರು ನಡೆಸಿಕೊಟ್ಟರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಯುವ ಸ್ಪೂರ್ತಿ ಸೇವಾ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಾಜನೂರಿನ ಮೊರಾರ್ಜಿ ದೇಸಾಯಿ ವಿಜ್ಞಾನ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲೋಕಪ್ಪ.ವಿ.ದಳವಾಯಿಯವರು ವಹಿಸಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಕೆರಿಯರ್ ಪ್ಲಾನಿಂಗ್ ಪಠ್ಯಕ್ರಮದ ತರಬೇತುದಾರರಾದ ಮುರಳಿ.ಎಸ್‌.ಡಿಯವರು ನಡೆಸಿಕೊಟ್ಟರೆ, ಸ್ವಾಗತವನ್ನು ಶಿಕ್ಷಕರಾದ ಶ್ರೀಮತಿ ಶ್ವೇತರವರು ಹಾಗೂ ವಂದನಾರ್ಪಣೆಯನ್ನು ಗಣಕವಿಜ್ಞಾನ ಶಿಕ್ಷಕಿಯಾದ ಪಂಕಜಾ.ಹೆಚ್.ಎಸ್ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕರ್ನಾಟಕದ ಹಲವು ವಸತಿ ಶಾಲೆಗಳ ಪ್ರಾಂಶುಪಾಲರುಗಳು ಹಾಗೂ ಶಿಕ್ಷಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Share It

You cannot copy content of this page