ಮೈಸೂರು: ಮುಂದೆ ಸಿಎಂ ಆಗುವ ಸಂದರ್ಭ ಬಂದರೆ, ಅವಕಾಶ ಸಿಕ್ಕಿದರೆ ಬೆಂಬಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಳಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿರಬಹುದು ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಆಗುವ ಅವಕಾಶ ಸಿಕ್ಕಿದರೆ ಜೆಡಿಎಸ್ನ 18 ಶಾಸಕರ ಬೆಂಬಲ ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಕೇಳಿರಬಹುದು. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದರು.