ಸುದ್ದಿ

BJP ಮುಖಂಡನ ಹತ್ಯೆ ಯತ್ನ ಪ್ರಕರಣ  : ಆರು ಜನ SDPI ಕಾರ್ಯಕರ್ಯರಿಗೆ 10 ವರ್ಷ ಜೈಲು ಶಿಕ್ಷೆ

Share It

ಶಿರಸಿ (ಉತ್ತರಕನ್ನಡ): 2019ರಲ್ಲಿ ನಡೆದಿದ್ದ ಬಿಜೆಪಿ ಮುಖಂಡನ ಕೊಲೆ ಯತ್ನ ಹಾಗೂ ಎಸ್‌ಡಿಪಿಐ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್​ಡಿಪಿಐ ಕಾರ್ಯಕರ್ತರಾಗಿದ್ದ ಆರು ಮಂದಿ ಆರೋಪಿಗಳಿಗೆ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

2019ರ ಏಪ್ರಿಲ್ 23ರಂದು ರಾತ್ರಿ ಕಸ್ತೂರಬಾ ನಗರದ ಕರಿಗುಂಡಿ ರಸ್ತೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಅನೀಶ್ ತಹಶೀಲ್ದಾರ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿ ದಾಳಿ ನಡೆಸಲಾಗಿತ್ತು. ಈ ಸಂಘರ್ಷದಲ್ಲಿ ಅನೀಶ್,  ಗಾಯಗೊಂಡು ಪಾರಾರಿಯಾಗಿದ್ದರಾದರೂ, ಇದೇ ವೇಳೆ ಎಸ್‌ಡಿಪಿಐ ಕಾರ್ಯಕರ್ತ ಅಸ್ಲಂ ಸೈಯದ್ ಬಾಬಾಜಾನ್ ಎಂಬವರು ಹತ್ಯೆಗೀಡಾಗಿದ್ದರು.

ಈ ಬಗ್ಗೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಕೊಲೆ ಯತ್ನಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕಿರಣ ಕಿಣಿ ಅವರು, ಆರು ಮಂದಿ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿ 10 ವರ್ಷಗಳ ಶಿಕ್ಷೆ ವಿಧಿಸಿದರು.

​ಮೊಹಮ್ಮದ್ ಫಾರೂಕ್ (32) ಮೊಹಮ್ಮದ್ ಸಲೀಂ (36), ​ಸರ್ಫರಾಜ್ ಪಟೇಲ್ (35), ಮಹಮದ್ ಆರಿಫ್ (34), ​ನಿಸಾರ್ ಅಹಮದ್ ಶೇಖ್ (29) ಹಾಗೂ ​ಮೊಸಿನ್ ಅಬ್ದುಲ್ ಶೂಖರ್ (39) ಶಿಕ್ಷೆಗೆ ಒಳಗಾದವರು.


Share It

You cannot copy content of this page