ನೆಲಮಂಗಲ: ಡಾಬಸ್ ಪೇಟೆಯ ಅಂಚೆಮನೆ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ರಾಫಿಕ್ ಜಾಮ್: ಬೈಕ್, ಎರಡು ಕಾರು, ಲಾರಿ, ಸರಕಾರಿ ಬಸ್, ಬೊಲೆರೋ ಜೀಪ್ ನಡುವೆ ಅಪಘಾತ ನಡೆದಿದ್ದು, ಬೆಂಗಳೂರು-ತುಮಕೂರು ರಸ್ತೆಯಲ್ಲಿ ಕೆಲಕಾಲ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು.ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಅಪಘಾತಕ್ಕೆ ತುತ್ತಾದ ವಾಹನಗಳ ತೆರವು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

