ಹರಿಯಾಣ: ಭೀಕರ ರಸ್ತೆ ಅಪಘಾತವೊಂದರಲ್ಲಿ ಏಳು ಜನರು ದುರ್ಮರಣ ಹೊಂದಿದ್ದು, ೨೫ ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಅಂಬಾಲಾ ಬಳಿ ನಡೆದಿದೆ.
ಬಸ್ ಮತ್ತು ಟ್ರಕ್ ನಡುವೆ ನಡೆದ ಅಪಘಾತದಲ್ಲಿ ಸ್ಥಳದಲ್ಲಿಯೇ ಏಳು ಜನ ದುರ್ಮರಣ ಹೊಂದಿದ್ದಾರೆ. ಬಸ್ ನಲ್ಲಿದ್ದು ೨೫ ಜನರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸಾವನ್ನಪ್ಪಿರುವ ಏಳು ಜನರ ಗುರುತುಗಳು ಈವರೆಗೆ ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತಪಟ್ಟವರ ಸಂಬAಧಿಕರನ್ನು ಗುರುತಿಸುವ ಕೆಲಸ ಆರಂಭಿಸಿದ್ದಾರೆ. ಟ್ರಕ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದು, ೨೫ ಜನರ ಪೈಕಿ ಗಂಭೀರವಾಗಿ ಗಾಯಗೊಂಡಿರುವವರಿಗೆ ಸೂಕ್ತ ತನಿಖೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ….