ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ವೈ ಧ್ವನಿ ಪರೀಕ್ಷೆ

BSY
Share It


ಬೆಂಗಳೂರು: ಮಾಜಿ ಸಿಎಂ ಬಿಎಸ್ವೈ ವಿರುದ್ಧ ದಾಖಲಾಗಿರುವ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಯಡಿಯೂರಪ್ಪ ಅವರ ಧ್ವನಿ ಸಂಗ್ರಹ ಮಾಡಿದ್ದಾರೆ.

ಅರಮನೆ ರಸ್ತೆಯ ಸಿಐಡಿ ಕಚೇರಿಗೆ ಶುಕ್ರವಾರ ಆಗಮಿಸಿದ ಮಾಜಿ ಸಿಎಂ ಯಡಿಯೂರಪ್ಪ ಅವರು ತನಿಖಾಧಿಕಾರಿ ಎದುರು ಹಾಜರಾದರು. ಅವರ ಧ್ವನಿ ಮುದ್ರಿಕೆ ದಾಖಲಿಸಿಕೊಂಡ ತನಿಖಾಧಿಕಾರಿ, ನಂತರ ವಾಪಸ್ ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಐಡಿ ಅಧಿಕಾರಿಗಳು, ಸಿಆರ್ಪಿಸಿ 164 ಅಡಿ ನ್ಯಾಯಾಧೀಶರ ಎದುರು ಬಾಲಕಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ, ಧ್ವನಿಮುದ್ರಿಕೆ ಸಂಗ್ರಹಿಸುವುದಕ್ಕಾಗಿ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದರು. ಹೀಗಾಗಿ,. ಬಿಎಸ್ವೈ ಖುದ್ದು ಹಾಜರಾಗಿದ್ದರು ಎನ್ನಲಾಗಿದೆ.

ಫೆ. 2 ರಂದು ಯಡಿಯೂರಪ್ಪ ಅವರ ಮನೆಗೆ ತೆರಳಿದ್ದ ವೇಳೆ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಾಲಕಿಯ ತಾಯಿ ದೂರು ನೀಡಿದ್ದರು. ಕೃತ್ಯಕ್ಕೆ ಸಂಬಂಧಪಟ್ಟಂತೆ ಕೆಲ ವಿಡಿಯೋ ಹಾಗೂ ಆಡಿಯೋಗಳನ್ನು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಸಂಬಂಧಿಸಿದ ಪೋಕ್ಸೊ ಕಾಯ್ದೆಯ ಸೆಕ್ಷನ್ 8 ಹಾಗೂ ಐಪಿಸಿ ಸೆಕ್ಷನ್ 354 (ಎ) ಅಡಿ ಸದಾಶಿವನಗರ ಠಾಣೆಯಲ್ಲಿ ಮಾಚರ್್ 14ರಂದು ಎಫ್ಐಆರ್ ದಾಖಲಾಗಿತ್ತು.


Share It

You cannot copy content of this page