ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪುರಸಭೆ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಚಿಕ್ಕಬಳ್ಳಾಪುರದ ಎರಡನೇ ಜಿಲ್ಲಾ ಅಪರ ನ್ಯಾಯಾಲಯದಲ್ಲಿ ರಾಜೀವ್ ಗೌಡ ಪರ ವಕೀಲ ಶಿವಶಂಕರ ರೆಡ್ಡಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿರುವ ರಾಜೀವ್ ಗೌಡ, ಪೊಲೀಸರ ಬಂಧನಕ್ಕೆ ಮೊದಲೇ ಜಾಮೀನು ಪಡೆಯುವ ಆಲೋಚನೆಯಲ್ಲಿದ್ದಾರೆ.
ಮಹಿಳಾ ಅಧಿಕಾರಿಗೆ ಬ್ಯಾನರ್ ತೆರವು ಮಾಡಿದ್ದಕ್ಕೆ ಸಂಬAಧಿಸಿದAತೆ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಧಮಕಿ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿ ಅಮೃತಾ ಗೌಡ ದೂರು ನೀಡಿದ್ದು, ರಾಜೀವ್ ಗೌಡ ಅವರನ್ನು ಬಂಧಿಸುವAತೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.

