ಫ್ಯಾಷನ್ ಸಿನಿಮಾ ಸುದ್ದಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ-ಉದ್ಯಮಿ ರಾಜ್ ಕುಂದ್ರಾ ದಂಪತಿ100 ಕೋಟಿ ರೂ. ಆಸ್ತಿ ಜಪ್ತಿ

Share It

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಸೇರಿದ 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಫ್ತಿ ಮಾಡಲಾಗಿದೆ.

ಇತ್ತೀಚೆಗಷ್ಟೇ ಶಿಲ್ಪಾ ಶೆಟ್ಟಿ ಹೆಸರಿಗೆ ಬರೆಯಲಾಗಿದ್ದ ಜುಹು ಬೀಚ್ ನಲ್ಲಿರುವ ಬಂಗಲೆ ಸೇರಿದಂತೆ 97.99 ಕೋಟಿ ರೂ. ಮೌಲ್ಯದ ಒಟ್ಟಾರೆ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಫ್ತಿ ಮಾಡಿದೆ.

ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಕೇಂದ್ರ ಜಾರಿ ನಿರ್ದೇಶನಾಲಯ(ಇ.ಡಿ) ಪುಣೆ, ಮುಂಬೈ ಸೇರಿದಂತೆ ವಿವಿಧೆಡೆಯ ಆಸ್ತಿಯನ್ನು ಜಪ್ತಿ ಮಾಡಿದೆ. ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ದಂಪತಿ ಈ ಪ್ರಕರಣದಲ್ಲಿ ನಾವು ಭಾಗಿಯಾಗಿಲ್ಲ ಎಂದು ಇತ್ತೀಚೆಗಷ್ಟೇ ಸ್ಪಷ್ಟನೆ ನೀಡಿದ್ದರು.


Share It

You cannot copy content of this page