ಶಿರಾಡಿಘಾಟ್ನಲ್ಲಿ ಭೂಕುಸಿತ: ರಾ.ಹೆ 75 ರಲ್ಲಿ ಸಿಲುಕಿದ ನೂರಾರು ವಾಹನಗಳು!
ಶಿರಾಡಿಘಾಟ್ನಲ್ಲಿ ಭಾರೀ ಭೂಕುಸಿತ ಉಂಟಾಗಿದ್ದರಿಂದ ಸಂಚಾರ ಬಂದ್ ಆಗಿದೆ. ಇನ್ನೊಂದೆಡೆ ಶಿರಾಡಿಘಾಟ್ ನಲ್ಲಿ ಮಣ್ಣು ತೆರವು ಕಾರ್ಯಾಚರಣೆ ಮುಂದುವರಿದಿದೆ.
ಇತ್ತ ಬಸ್, ಕಾರಿ, ಕಾರು ಹಾಗು ಟ್ಯಾಂಕರ್ ಗಳು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಿಲುಕಿಕೊಂಡಿವೆ. ಇದರಿಂದ ಜನರು ಗಂಟೆಗಟ್ಟಲೆ ಕಾದು ಸುಸ್ತಾಗಿದ್ದು, ವಾಪಸ್ ಹೋಗಲಾಗದೆ, ಸ್ಥಳದಲ್ಲಿ ಯಾವುದೇ ಸೌಲಭ್ಯ ಇಲ್ಲದೆ ಪರದಾಡುತ್ತಿದ್ದಾರೆ.


