ಲಕ್ನೋ:ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಮೋಹನ್ ಲಾಲ್ ಗಂಜ್ ಬಳಿಯ ಕಿಸಾನ್ ಪಥ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಈ ಸಮಯದಲ್ಲಿ ಪ್ರಯಾಣಿಕರು ನಿದ್ರೆ ಮಂಪರಿನಲ್ಲಿದ್ದರು.
ಬಸ್‌ನಲ್ಲಿ ಹೊಗೆ ತುಂಬಲು ಪ್ರಾರಂಭಿಸಿದ ನಂತರವೇ ಅವರು ಎಚ್ಚರಗೊಂಡರು. ಆಘಾತಕಾರಿ ಸಂಗತಿಯೆಂದರೆ, ಚಾಲಕ ಕಿಟಕಿ ಒಡೆದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ 30 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು, ಆದರೆ ಆ ಹೊತ್ತಿಗೆ ಇಡೀ ಬಸ್ ಸುಟ್ಟು ಭಸ್ಮವಾಗಿತ್ತು.
ಇನ್ನೂ ಘಟನೆ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.