ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ, ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಂಪೂರ್ಣವಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕನ್ನಡಿಗರಿಗೆ ಕರ್ನಾಟಕದಲ್ಲಿ ಉದ್ಯೋಗದಲ್ಲಿ ಮೀಸಲಾತಿ ನೀಡುವುದಕ್ಕೆ ಫೋನ್ ಪೇ ಸಿಇಓ ಸಮೀರ್ ನಿಗಮ್ ವಿರೋಧ ವ್ಯಕ್ತಪಡಿಸಿ ಈ ಕಾನೂನಿಗೆ ‘ನಾಚಿಕೆಗೇಡು’ ಎಂದು ಆಕ್ಷೇಪಿಸಿದ್ದಾರೆ.
ಆದರೆ ಇನ್ಫೋಸಿಸ್ ಸಿಇಓ ಸಲೀಲ್ ಪಾರೇಖ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ‘ರಾಜ್ಯ ಸರ್ಕಾರ ಯಾವುದೇ ಕಾನೂನು ಜಾರಿಗೆ ತಂದರೂ ಅದನ್ನು ಒಪ್ಪುತ್ತೇವೆ’ ಎಂದಿದ್ದಾರೆ.
