ರಾಜಕೀಯ ಸುದ್ದಿ

5 ವರ್ಷವೂ ಸಿದ್ದರಾಮಯ್ಯ ಸಿಎಂ: ಸಿಎಂ ಬದಲಾವಣೆಗೆ ಹೈಕಮಾಂಡ್ ಮನಸ್ಸು ಮಾಡಿಲ್ಲ: ಅಲ್ಲೋಲಕಲ್ಲೋಲ ಎಬ್ಬಿಸಿದ ಯತೀಂದ್ರ ಹೇಳಿಕೆ

Share It

ಮೈಸೂರು: ಸಿಎಂ ಬದಲಾವಣೆ ಒತ್ತಡಕ್ಕೆ ಡಾ.ಯತೀಂದ್ರ ಮತ್ತೊಂದು ಸುತ್ತಿನ ತುಪ್ಪ ಸುರಿದಿದ್ದು, ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ಸ್ಪಷ್ಟವಾಗಿದೆ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ. ಸದ್ಯಕ್ಕೆ ಅವರನ್ನು ಇಳಿಸಿ ಎಂದು ಯಾರು ಕೇಳುತ್ತಿಲ್ಲ. ಹೈಕಮಾಂಡ್ ನೇರವಾಗಿ ಹೇಳದೇ ಇರಬಹುದು, ಆದರೆ ಸದ್ಯಕ್ಕೆ ನಾಯಕತ್ವದಲ್ಲಿ ಬದಲಾವಣೆ ಮಾಡಲ್ಲ ಎಂದು ಸ್ಪಷ್ಟವಾಗಿ ಸಿಗ್ನಲ್ ಕೊಟ್ಟಿದೆ. ಆದ್ದರಿಂದ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ  ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರು 5 ವರ್ಷ ಸಿಎಂ ಆಗಿರುತ್ತಾರೆ ಎಂದು ಮತ್ತೊಮ್ಮೆ ಪುನರುಚ್ಚರಿಸಿದರು. ಸಿಎಂ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆ ಆಗುತ್ತಿಲ್ಲ. ಕೇವಲ ಮಾಧ್ಯಮದಲ್ಲಿ ಮಾತ್ರ ಚರ್ಚೆ ಆಗುತ್ತಿದೆ. ಸಿಎಂ ಬದಲಾವಣೆ ವಿಷಯ ಈಗಾಗಲೇ ಸೆಟಲ್ ಆಗಿದೆ. ಸಿಎಂ ಅವರನ್ನು ಕೆಳಗೆ ಇಳಿಸಿ ಎಂದು ಯಾರೂ ಹೇಳಿಲ್ಲ. ಜತೆಗೆ ಕೆಲವರ ಬೇಡಿಕೆಗೂ ಹೈಕಮಾಂಡ್ ಕೂಡ ಯಾವುದೇ ಮನ್ನಣೆ ಕೊಟ್ಟಿಲ್ಲ ಎಂದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.


Share It

You cannot copy content of this page