ಅಪರಾಧ ರಾಜಕೀಯ ಸುದ್ದಿ

ದೇವರಾಜೇಗೌಡ ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ

Share It

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹೊಳೆನರಸೀಪುರದ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ ನಡೆಸಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮಹಿಳೆಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬAಧಿಸಿ ಹಿರಿಯೂರು ಬಳಿ ದೇವರಾಜೇಗೌಡ ಅವರನ್ನು ಬಂಧಿಸಲಾಗಿದೆ. ಹೊಳೆನರಸೀಪುರ ಪೊಲೀಸರು ಅವರನ್ನು ವಶಕ್ಕೆ ಪಡೆದು, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಅವರನ್ನು ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಈ ನಡುವೆ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬAಧಿಸಿ ಪ್ರಮುಖ ವ್ಯಕ್ತಿಯಾಗಿರುವ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ ನಡೆಸಿದೆ. ಸೋಮವಾರ ನ್ಯಾಯಾಲಯದ ಮುಂದೆ ದೇವರಾಜೇಗೌಡ ಅವರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಲು ಎಸ್‌ಐಟಿ ತೀರ್ಮಾನಿಸಿದೆ.

ವಿವಿಧ ಪ್ರಕರಣ ರೀ-ಓಪನ್: ಈ ನಡುವೆ ದೇವರಾಜೇಗೌಡ ವಿರುದ್ಧ ದಾಖಲಾಗಿರುವ ವಿವಿಧ ಪ್ರಕರಣಗಳನ್ನು ರೀ-ಓಪನ್ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಅವರ ವಿರುದ್ಧ ಈ ಹಿಂದೆ ಜಿಲ್ಲಾಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ, ಜಾತಿನಿಂದನೆ, ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ಪ್ರಕರಣಗಳನ್ನು ರೀ-ಓಪನ್ ಮಾಡಿ, ಅವರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ ನಡೆದಿದೆ.


Share It

You cannot copy content of this page