ಬೆಂಗಳೂರು: ಪ್ರಜ್ವಲ್ ರೇವಣ್ಣ ಎಲ್ಲಿದ್ದಾನೆ ಎಂದು ಎಸ್ಐಟಿಗೆ ಗೊತ್ತಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ನಿನ್ನೆ ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಅಂತಾರಾಷ್ಟ್ರೀಯ ವಿಮಾನದ ಮೂಲಕ ಬರಬೇಕಿದ್ದ ಪ್ರಜ್ವಲ್ ರೇವಣ್ಣ ದಿಢೀರ್ ಫ್ಲೈಟ್ ಟಿಕೆಟ್ ಕ್ಯಾನ್ಸಲ್ ಮಾಡಿ ಜರ್ಮನಿಯ ಅಜ್ಞಾತ ಸ್ಥಳವೊಂದರಲ್ಲಿ ಅಡಗಿದ್ದಾರೆ ಎಂದು ಎಸ್ಐಟಿಗೆ ಮಾಹಿತಿ ಸಿಕ್ಕಿದೆ.
ಒಟ್ಟಾರೆ ಪೆನ್ ಡ್ರೈವ್ ಕೇಸ್ ನಲ್ಲಿ ಎಸ್ಐಟಿ ತನಿಖಾ ತಂಡಕ್ಕೆ ವಿಚಾರಣೆ ನಡೆಸಲು ಅತ್ಯಗತ್ಯವಾಗಿ ಬೇಕಿರುವ ಪ್ರಜ್ವಲ್ ರೇವಣ್ಣ ಪದೇ ಪದೇ ಹೀಗೆ ಎರಡು ಬಾರಿ ಜರ್ಮನಿಯಿಂದ ಫ್ಲೈಟ್ ಟಿಕೆಟ್ ಕ್ಯಾನ್ಸಲ್ ಮಾಡಿರುವುದು ಅನುಮಾನಗಳನ್ನು ಸೃಷ್ಟಿಸಿದೆ.
ಹಿಂದೆ ಇದೇ ರೀತಿ ಜರ್ಮನಿಯ ಮ್ಯೂನಿಚ್ ನಗರದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫ್ಲೈಟ್ ಟಿಕೆಟ್ ಬುಕ್ ಮಾಡಿದ್ದ ಪ್ರಜ್ವಲ್ ರೇವಣ್ಣ ತಂದೆ ಎಚ್.ಡಿ.ರೇವಣ್ಣ ಎಸ್ಐಟಿಯಿಂದ ಅರೆಸ್ಟ್ ಆದ ಕೂಡಲೇ ಫ್ಲೈಟ್ ಟಿಕೆಟ್ ಕ್ಯಾನ್ಸಲ್ ಮಾಡಿ ಜರ್ಮನಿಯಲ್ಲಿ ಭೂಗತರಾಗಿದ್ದರು.