ಅನಾರೋಗ್ಯದಿಂದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

Oplus_131072

Oplus_131072

Share It

ಬೆಂಗಳೂರು : ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್​.ಎಂ ಕೃಷ್ಣ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಎಸ್.ಎಂ.ಕೃಷ್ಣ ನಗರದ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆದರೆ ಇನ್ನು ಎರಡು ಅಥವಾ ಮೂರು ದಿನ ಆಸ್ಪತ್ರೆಯಲ್ಲಿ ಇರಲಿದ್ದು ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವರದಿ ಆಗಿದೆ.

ಇತ್ತೀಚೆಗೆ ತೀವ್ರ ಜ್ವರದಿಂದ ಬಳಲಿದ್ದ ಎಸ್​.ಎಂ ಕೃಷ್ಣ ಅವರು ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದರು. ಇದೀಗ ಮತ್ತೆ ತೀವ್ರ ಶೀತ ಮತ್ತು ಜ್ವರದಿಂದಾಗಿ ಬಳಲಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇತ್ತೀಚೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್​ ಚಂದ್ರು) ಅವರು ಎಸ್​.ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದರು.

ಈ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಾಣಿಗ ರವಿ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಹೊನ್ನಲಗೆರೆ ರಾಮಕೃಷ್ಣ, ಮಾಜಿ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಸದಾಶಿವನಗರದ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿ ಸದ್ಯದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದರು. ಮಂಡ್ಯ ಕಾಂಗ್ರೆಸ್​ ನಾಯಕರ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿತ್ತು.


Share It

You cannot copy content of this page