ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಮಣಿಪಾಲ್ ಆಸ್ಪತ್ರೆ ಈ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಶ್ವಾಸಕೋಶ ಸೋಂಕಿನಿAದ ಬಳಲುತ್ತಿರುವ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದೆ.
ಕಳೆದ ಹದಿನೈದು ದಿನದಿಂದ ಎಸ್.ಎಂ.ಕೃಷ್ಣ ಅವರು ಆಸ್ಪತ್ರೆಯಲ್ಲಿದ್ದಾರೆ. ಅವರನ್ನು ರಾಜ್ಯದ ಗಣ್ಯಾತೀಗಣ್ಯರೆಲ್ಲ ಭೇಟಿಯಾಗಿ ಆರೋಗ್ಯ ವಿಚಾರಣೆ ಮಾಡುತ್ತಿದ್ದಾರೆ. ಈ ನಡುವೆ ಅವರ ಆರೋಗ್ಯದ ಕುರಿತು ಊಹಾಪೋಹಗಳು ಏಳುತ್ತಿದ್ದು, ಆಸ್ಪತ್ರೆ ಇದೆಲ್ಲದಕ್ಕೂ ತೆರೆ ಎಳೆದಿದೆ.
ಅವರ ಆರೋಗ್ಯ ಸ್ಥಿರವಾಗಿರುವ ಕುರಿತು ಬುಲೆಟಿನ್ ಬಿಡುಗಡೆ ಮಾಡಿದೆ. ಡಾ. ಸತ್ಯನಾರಾಯಣ ಅವರ ವೈದ್ಯರ ತಂಡ ಎಸ್.ಎಂ. ಕೃಷ್ಣ ಅವರ ಆರೋಗ್ಯದ ಮೇಲೆ ನಿಗಾಯಿಟ್ಟಿದೆ ಎಂದು ಆಸ್ಪತ್ರೆ ತಿಳಿಸಿದೆ.