ಹಾಸನ: ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಟ್ರಕ್ ವೊಂದು ಅಡ್ಡಾದಿಡ್ಡಿ ಹರಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡವರ ಪೈಕಿ 18 ಜನರಿಗೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನುಳಿದ 7 ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾಸನ- ಹೊಳೆನರಸೀಪುರ ರಸ್ತೆಯಲ್ಲಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ನಡೆಯುತ್ತಿತ್ತು. ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಯುವಾಗ ಡಿ.ಜೆ. ಶಬ್ದಕ್ಕೆ ಡ್ಯಾನ್ಸ್ ಮಾಡುತ್ತಿದ್ದವರ ಮೇಲೆ ಟ್ರಕ್ ಹರಿದಿದೆ. ಟ್ರಕ್ ಚಾಲಕ ಭುವನೇಶ್ ಎಂಬಾತನಿಗೂ ಗಂಭೀರವಾಗಿ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಘಟನೆಗೆ ಸಂಬಂಧಿಸಿದಂತೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಂದ ಮಾಹಿತಿಬಪಡೆದುಕೊಂಡಿದ್ದು, ಶನಿವಾರ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಘಟನೆಗೆ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ರಪಡಿಸಿದ್ದು, ಪ್ರತಿಪಕ್ಷ ನಾಯಕ ಆರ್. ಅಶೋಕ್, ಘಟನಾಸ್ಥಳಕ್ಕೆ ಭೇಟಿ ನೀಡಲಿದ್ದಾರೆ.