ಬೆಂಗಳೂರು ವಿಧಾನಪರಿಷತ್ ಚುನಾವಣೆಯ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಡಿ.ಟಿ.ಶ್ರೀನಿವಾಸ್ ಅವರು ಇಂದು ಮಂಗಳವಾರ ಬೆಳಗ್ಗೆ ಶಾಂತಿನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿವಕುಮಾರ್ ಸಚಿವ ಮಧು ಬಂಗಾರಪ್ಪ ಸೇರಿದಂತೆ ಸಚಿವರ ಸಮ್ಮುಖದಲ್ಲಿ ಡಿ.ಟಿ.ಶ್ರೀನಿವಾಸ್ ಆಗ್ನೇಯ ಶಿಕ್ಷಕರ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಡಿ.ಟಿ.ಶ್ರೀನಿವಾಸ್ ಅವರು ಕೆಎಎಸ್ ಅಧಿಕಾರಿ ಹುದ್ದೆಗೆ ರಾಜಿನಾಮೆ ನೀಡಿ ಸಮಾಜಸೇವೆ ಮತ್ತು ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದರು.
ಡಿ.ಟಿ.ಶ್ರೀನಿವಾಸ್ ಅವರು ಮಾಜಿ ಸಚಿವ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿಯಾದ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ.