ಸುದ್ದಿ

SSLC ತೃತೀಯ ಭಾಷೆಗೆ ಗ್ರೇಡ್​​ ನಿರ್ಧಾರ ಹೇಗೆ?

Share It

ಎಸ್​​ಎಸ್​​ಎಲ್​​ಸಿ ಪರೀಕ್ಷೆಯ ತೃತೀಯ ಭಾಷೆಗೆ ಅಂಕಗಳನ್ನು ನೀಡುವ ಬದಲು ಗ್ರೇಡ್​​ ನೀಡುವ ನಿರ್ಧಾರ ಸಂಬಂಧ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಇದೇ ವಿಚಾರ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಮೌಲ್ಯಮಾಪನ ಕುರಿತ ಕರಡು ಅಧಿಸೂಚನೆಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲಾಗುತ್ತದೆ ಹಾಗೂ ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಪರಿಗಣಿಸಲಲು ನಿರ್ಧರಿಸಿರುವ ಬಗ್ಗೆ ಇತ್ತೀಚೆಗೆ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದರು.


Share It

You cannot copy content of this page