ಉಪಯುಕ್ತ ಸುದ್ದಿ

ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್

Share It

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಎಂಬುದು ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟ, ಈ ನಿಟ್ಟಿನಲ್ಲಿ ೨೦೨೩-೨೪ ನೇ ಸಾಲಿನಲ್ಲಿ ಪರೀಕ್ಷೆ ಬರೆದಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಇಂದು ಹೊರಬೀಳಲಿದೆ.

೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಲಿದೆ. ಬೆಳಗ್ಗೆ ೧೦.೩೦ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಪ್ರಕಟ ಮಾಡಲಿದೆ. ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದು, ನಂತರ ವಿದ್ಯಾರ್ಥಿಗಳು ವೆಬ್‌ಸೈಟ್ ಮತ್ತು ತಮ್ಮ ಶಾಲಾ ಕಚೇರಿಗಳಲ್ಲಿ ಫಲಿತಾಂಶ ಪಡೆದುಕೊಳ್ಳಬಹುದು.

ಈ ಬಾರಿ ೮.೬೯ ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-೧ನ್ನು ದಿನಾಂಕ ೨೫.೦೩.೨೦೨೪ ರಿಂದ ೦೬.೦೪.೨೦೨೪ ರವರೆಗೆ ಬರೆದಿದ್ದಾರೆ. ೪,೪೧,೯೧೦ ಬಾಲಕರು ಮತ್ತು ೪,೨೮,೦೫೮ ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ಇಂದು ಇವರ ಭವಿಷ್ಯ ನಿರ್ಧಾರವಾಗಲಿದೆ.

೨೦೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ವೀಕ್ಷಿಸಲು https://karresults.nic.in ಜಾಲತಾಣ ಬಳಸಿ, ಬೆಳಗ್ಗೆ ೧೦.೩೦ ನಂತರ ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದೆ.


Share It

You cannot copy content of this page