ಉಪಯುಕ್ತ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಮೊದಲು, ಯಾದಗಿರಿಗೆ ಕೊನೆಯ ಸ್ಥಾನ: ಬಾಲಕಿಯದ್ದೇ ಮೇಲುಗೈ

Share It


ಬೆಂಗಳೂರು: ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬಂದಿದ್ದು, ಎಂದಿನಂತ ಕರಾವಳಿ ಜಿಲ್ಲೆ ಉಡುಪಿ ಮೊದಲ ಸ್ಥಾನ ಪಡೆದಿದ್ದರೆ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಮಲ್ಲೇಶ್ವರದ ಪರೀಕ್ಷಾ ಪ್ರಾಧಿಕಾರದಲ್ಲಿ ಸುದ್ದಿಗೋಷ್ಠಿ ನಡೆಸಿ, ಫಲಿತಾಂಶ ಪ್ರಕಟ ಮಾಡಲಾಗಿದ್ದು, ಉಡುಪಿ ಪ್ರಥಮ ಸ್ಥಾನ(94%) ಪಡೆದಿದೆ. ದ್ವಿತೀಯ ಸ್ಥಾನ ದಕ್ಷಿಣ ಕನ್ನಡ(92.12%) ಜಿಲ್ಲೆಗೆ ಸಿಕ್ಕಿದ್ದು ಶಿವಮೊಗ್ಗ (88.67%) ಮೂರನೇ ಸ್ಥಾನ ಪಡೆದಿದೆ. ಇನ್ನು ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲೆ ಯಾದಗಿರಿ (50.59%)ಯಾಗಿದೆ.

ರಾಜ್ಯಾದ್ಯಂತ 8 ಲಕ್ಷ 69 ಸಾವಿರದ 968 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಎಂದಿನಂತೆ ಈ ಬಾರಿಯೂ ಕೂಡ ಹೆಣ್ಣುಮಕ್ಕಳೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. 2024ರ ಮಾ.23ರಿಂದ 2024ರ ಏಪ್ರಿಲ್ 6 ರವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 4,41,910 ವಿದ್ಯಾರ್ಥಿಗಳು, 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 6,31,204 ವಿದ್ಯಾರ್ಥಿಗಳು ಪಾಸ್ ಆಗಿದ್ದು ಈ ಬಾರಿ ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಬಾಲಕಿಯರದ್ದೇ ಮೇಲುಗೈ: ಎಂದಿನಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 2,87,416 (65.90%) ಬಾಲಕರು ಉತ್ತೀರ್ಣವಾಗಿದ್ದು, 3,43,788 (81.11%) ಬಾಲಕಿಯರು ಪಾಸ್ ಆಗಿದ್ದಾರೆ.


Share It

You cannot copy content of this page