ಬೆಂಗಳೂರು: ಮೇ 15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್‌ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯಸರ್ಕಾರ ಆದೇಶ ಹೊರಡಿಸಿದೆ.
ಈ ಹಿನ್ನಲೆ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 7 ರಿಂದ ನಡೆಯಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ಕೂಡ ಮುಂದೂಡಲಾಗಿದ್ದು, ಅದನ್ನು ಜೂ.14 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.
ಈ ಹಿಂದೆ ಮೇ 15ರಿಂದ ಜೂನ್ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29 ರಿಂದ ಜೂನ್ 13ರವರೆಗೆ ನಡೆಸಲು ಆದೇಶ ನೀಡಲಾಗಿದೆ.
ಇನ್ನು ಎಸ್ಎಸ್ಎಲ್‌ಸಿ ಪರೀಕ್ಷೆ-2 ಜೂನ್ 14ರಿಂದ ಆರಂಭವಾಗಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಲಿದೆ.