ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಜಯನಗರ 4ನೇ ಟಿ-ಬ್ಲಾಕ್ ನ ಸ್ವಾಗತ್ ರಸ್ತೆಯಲ್ಲಿರುವ ಸ್ಟಾರ್ ಅಂಬೂರ್ ಬಿರಿಯಾನಿ ಹೋಟೆಲ್ ನಲ್ಲಿ ಹಸಿ ಕಸ ಹಾಗೂ ಒಣ ಕಸ ಬೇರ್ಪಡಿಸದೆ ಘನತ್ಯಾಜ್ಯ ನಿರ್ವಹಣೆ ಸರಿಯಾಗಿ ನಿರ್ವಹಣೆ ಮಾಡದೇ ಇದ್ದುದರಿಂದ ಪಾಲಿಕೆ ಘನತ್ಯಾಜ್ಯ ವಿಭಾಗದಿಂದ ಹೋಟೆಲ್ ಮೇಲೆ ದಾಳಿ ನಡೆಸಲಾಗಿದೆ.
ದಾಳಿ ವೇಳೆ ಶುಚಿತ್ವ ಕಾಪಾಡದೆ ಘನತ್ಯಾಜ್ಯ ನಿರ್ವಹಣೆ ಮಾಡದಿರುವುದಲ್ಲದೆ ಹೋಟೆಲ್ ಒಳಗಡೆ ಅಶುಚಿತ್ವ ಹೊಂದಿರುವುದರಿಂದ ಘನತ್ಯಾಜ್ಯ ನಿರ್ವಹಣೆ ನಿಯಮಗಳಡಿಯಲ್ಲಿ ಹೋಟೆಲ್ ಮಾಲೀಕರಿಗೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಹಾಗೂ ಘನತ್ಯಾಜ್ಯ ನಿರ್ವಹಣೆ ಕುರಿತು ಅರಿವು ಮೂಡಿಸಿ ಅಶುಚಿತ್ವ ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಎಚ್ಚರಿಕೆ ನೀಡಲಾಗಿದೆ.
ಈ ವೇಳೆ BSWML AGM ಶ್ರೀಮತಿ ಶ್ವೇತಾ, ಮಾರ್ಷಲ್ ಸೂಪರ್ವೈಸರ್, ಮಾರ್ಷಲ್ ಗಳು ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕರು ಉಪಸ್ಥಿತರಿದ್ದರು.

