ಉಪಯುಕ್ತ ಸುದ್ದಿ

ಗ್ರಾಮ ಪಂಚಾಯತಿ ಚುನಾವಣೆಗೆ ಪೂರ್ವಸಿದ್ಧತೆ ಆರಂಭಿಸಿ:ಜಿಲ್ಲಾಧಿಕಾರಿಗಳಿಗೆ ಸೂಚನೆ

Share It

ಬೆಂಗಳೂರು: ಗ್ರಾಮಪಂಚಾಯಿತಿಗಳ ಜನಪ್ರತಿನಿಧಿಗಳ ಅಧಿಕಾರವಧಿ ಮುಗಿದಿದ್ದು, ೨೦೨೬-೩೧ನೇ ಸಾಲಿನ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

೨೦೨೦-೨೫ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿ ೨೦೨೬ರ ಜನವರಿಗೆಪೂರ್ಣಗೊಳ್ಳಲಿದೆ. ಅವಧಿ ಮುಕ್ತಾಯಗೊಳ್ಳುವ ಗ್ರಾಮ ಪಂಚಾಯ್ತಿಗಳಿಗೆ ೨೦೨೫ರ ಡಿಸೆಂಬರ್ ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಬೇಕಾಗಿತ್ತು. ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಒಳಗೊಂಡAತೆ, ಇತರ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಆಯೋಗವು ಮಾಡಿಕೊಳ್ಳಬೇಕಾಗಿರುತ್ತದೆ. ಆದುದರಿಂದ ನಿಗದಿತ ಕಾಲಮಿತಿಯಲ್ಲಿ ಮೀಸಲಾತಿ ಅಧಿಸೂಚನೆಯನ್ನು ಹೊರಡಿಸಿ, ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಆಯೋಗ ಕೋರಿದೆ ಎಂದು ತಿಳಿಸಿದೆ.

ಪ್ರಸ್ತುತ ಬಹುತೇಕ ಗ್ರಾಮ ಪಂಚಾಯಿತಿಗಳ ಅವಧಿಯು ಜನವರಿ-೨೦೨೬ ತಿಂಗಳನಿAದ ಮಾರ್ಚ್-೨೦೨೬ ತಿಂಗಳವರೆಗೆ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ೧೯೯೩ರ ಅಡಿ ಗ್ರಾಮ ಪಂಚಾಯಿತಿಗಳಿಗೆ ೨೦೨೬-೩೧ನೇ ಸಾಲಿನ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ ನಡೆಸಲು ಬೇಕಾಗಿರುವ ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದೆ

ಜಿಲ್ಲಾಧಿಕಾರಿಗಳು ಪೂರ್ವ ಸಿದ್ಧತೆಗೆ ಸಂಬAಧಿಸಿದAತೆ, ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಮತ್ತು ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.


Share It

You cannot copy content of this page