ಸುದ್ದಿ

ರಾಜ್ಯದ ಹವಾಮಾನ ಇಲಾಖೆ ಮುನ್ಸೂಚನೆ 

Share It

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗುಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ ಕೆಲವೆಡೆ ಇಂದು ಗುಡುಗು ಸಹಿತ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿಯ ಎಚ್ಚರಿಕೆ.

ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಮಳೆ ಸಾಧ್ಯತೆ ಕಡಿಮೆ ಎಂದಿದೆ.

ಬೆಂಗಳೂರಿನಲ್ಲಿ ಇಂದಿನಿಂದ ಮೋಡ ಕವಿದ ವಾತಾವರಣ ಇರಲಿದೆ. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್​​ಗೆ ಕುಸಿಯುವ ಸಾಧ್ಯತೆ ಇದೆ. ಏಪ್ರಿಲ್ 19ರವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.


Share It

You cannot copy content of this page