ಬೆಂಗಳೂರು: ಗ್ರಾಮೀಣ ಭಾಗದ ಪ್ರದೇಶಗಳಲ್ಲಿ ಕುಡಿಯುವ ನೀರು ಕಲುಷಿತ ಪ್ರಕರಣಗಳು ಹೆಚ್ಚಾಗುತ್ತಿದ್ದು,
ಮುನ್ನೇಚ್ಚರಿಕೆ ತೆಗೆದುಕೊಳ್ಳದೆ ಇರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣ ಅಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿರುವ ಸಚಿವರು, ಕೆಲವು ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಹಾಗೂ ಪ್ರಾಣಹಾನಿ ಸಂಭವಿಸುತ್ತಿದ್ದು, ಇಂತಹ ಪ್ರಕರಣ ಮರುಕಳಿಸದಂತೆ ಎಚ್ಚರಿಕೆ ವಹಿಸಿ ಎಂದು ಸಂಬಂಧಪಟ್ಟಅಧಿಕಾರಿಗಳಿಗೆ ಇಲಾಖೆಯಿಂದ ನೀರ್ದೆಶನ ನೀಡಲಾಗಿದ್ದರೂ ಪ್ರಕರಣಗಳು ಮತ್ತೆ ಮತ್ತೆ ಬೆಳಕಿಗೆ ಬರುತ್ತಿರುವುದು ಕಂಡು ಬಂದಿದೆ ಎಂದು ತಿಳಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲ್ಲ; ನೀರು ಸರಬರಾಜು ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಕಾಲಕಾಲಕ್ಕೆ ಮೇಲ್ವಿಚಾರಣೆ ನಡೆಸಿ ಶುದ್ದ ನೀರಿನ ಘಟಕಗಳ ದುರಸ್ಥಿ ಕೈಗೊಳ್ಳಬೇಕು. ಅಧಿಕಾರಿಗಳ ನಿರ್ಲಕ್ಷ್ಯತನ ದಿಂದ ಪ್ರಕರಣ ಮರುಕಳಿಸಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.