ಹೊಸವರ್ಷಾಷರಣೆಗೆ ಕಟ್ಟುನಿಟ್ಟಿನ ನಿಯಮ: 30 ಸೂಚನೆಗಳನ್ನು ಕೊಟ್ಟ ಪೊಲೀಸರು
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ತಿಳಿಸಿದ್ದಾರೆ.
ಹೊಟೇಲ್, ಪಬ್ ಮಾಲೀಕರ ಸಭೆ ನಡೆಸಿ, ಕಟ್ಟುನಿಟ್ಟಾಗಿ 30 ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ. ಎಲ್ಲ ಹೊಟೇಲ್ಗಳಲ್ಲಿ ಕುಟುಂಬ ಸದಸ್ಯರಿಗೆ ಪ್ರತ್ಯೇಕ ಕೊಠಡಿ ಒದಗಿಸುವುದು, ಸ್ನೇಹಿತರಿಗೆ ಪ್ರತ್ಯೇಕ ವ್ಯವಸ್ಥೆ ಮಾಡುವುದು ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇನ್ನುಳಿದಂತೆ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆಧ್ಯತೆ ವಹಿಸಬೇಕು, ಸಿಸಿ ಕ್ಯಾಮೆರಾ ಅಳವಡಿಕೆ, ಎಂಟ್ರಿ, ಎಕ್ಸಿಟ್, ಪಾರ್ಕಿಂಗ್, ಅಗ್ನಿಸುರಕ್ಷತೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಮಾಹಿತಿಯನ್ನು ಪೊಲೀಸರೊಂದಿಗೆ ಹಂಚಿಕೊAಡು ಸುಗಮ ಹೊಸ ವರ್ಷದ ಆಚರಣೆಗೆ ಸಹಕಾರ ನೀಡಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.


