ಕುಣಿಗಲ್: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.
ಮೃತ ದುರ್ದೈವಿ ವರ್ಷಿಣಿ (19) ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದವರಾಗಿದ್ದು, ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಎ ಪದವಿಯನ್ನು ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.
ಆರೋಗ್ಯ ಸಮಸ್ಯೆಯಿಂದ ಮನನೊಂದು ಸಿದ್ದಗಂಗಾ ಇಂಟರ್ ಸಿಟಿ ರೈಲಿಗೆ ಸಿಲುಕಿದ್ದಾಳೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾಳೆ.

