ರಾಜಕೀಯ ಸುದ್ದಿ

ಸಾರಿಗೆ ಸಂಸ್ಥೆಗಳ ಒಕ್ಕೂಟದಿಂದ ಸೌಮ್ಯಾ ರೆಡ್ಡಿಗೆ ಬೆಂಬಲ

Share It

ಬೆಂಗಳೂರು: ಬೆಂಗಳೂರು ದಕ್ಷಿಣದಲ್ಲಿ ಹಾಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಿನೇದಿನೇ ವಿರೋಧಗಳು ಹೆಚ್ಚಾಗುತ್ತಿದ್ದು, ಅದರ ಲಾಭವನ್ನು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಬಳಸಿಕೊಳ್ಳುತ್ತಿದ್ದಾರೆ.

ಇದೀಗ 32 ಸಾರಿಗೆ ಸಂಸ್ಥೆಗಳ ಒಕ್ಕೂಟ ಬೆಂಗಳೂರು ದಕ್ಷಿಣದ ಕಾಂಗ್ರೆಸ್ ಅಭ್ಯರ್ಥಿಯಾದ ಸೌಮ್ಯಾ ರೆಡ್ಡಿ ಅವರನ್ನು ಬೆಂಬಲಿಸಲು ತೀರ್ಮಾನಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾದ 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ (ಆಟೋ, ಟ್ಯಾಕ್ಸಿ, ವ್ಯಾನ್, ಖಾಸಗಿ ಬಸ್ಸುಗಳು, ಶಾಲಾ ಬಸ್ಸುಗಳು ಸರಕು ಸಾಗಣೆ ವಾಹನಗಳು ಹಾಗೂ ಇತರೆ ಸರಕು ಸಾಗಣೆ ವಾಹನಗಳು) ಮತ್ತು ವಾಹನಗಳ ಮಾಲೀಕರು ಮತ್ತು ಚಾಲಕರು ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುವುದಾಗಿ ತಿಳಿಸಿ, ತಮ್ಮ ಪುತ್ರಿ ಸೌಮ್ಯರೆಡ್ಡಿ ಅವರಿಗೇ ಈ ಬಾರಿ ಬೆಂಬಲ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಕಳೆದ ವರ್ಷ ಸೆಪ್ಟೆಂಬರ್ 11 ರಂದು ಮುಷ್ಕರ ನಡೆಸಿತ್ತು. ಈ ಸಂದರ್ಭದಲ್ಲಿ ತಮ್ಮ 30 ಬೇಡಿಕೆಗಳನ್ನು ಪರಿಗಣಿಸಲು ಸಕರ್ಾರಕ್ಕೆ ಮನವಿ ಸಲ್ಲಿಸಿತ್ತು. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಮುಷ್ಕರ ನಿರತರನ್ನು ಮನವೊಲಿಸಿ, ಎಲ್ಲರ ಸಮಸ್ಯೆಗಳನ್ನು ಸೌಜನ್ಯದಿಂದ ಆಲಿಸಿ, 9 ತಿಂಗಳು 5 ದಿನದ ಅವಧಿಯಲ್ಲಿ 20 ಪ್ರಮುಖ ಬೇಡಿಕೆಗಳನ್ನು ಈಡೇರಿಸಿ, ಐತಿಹಾಸಿಕ ನಿರ್ಣಯಗಳನ್ನು ತೆಗೆದುಕೊಂಡು ಖಾಸಗಿ ವಾಹನ ಚಾಲಕರ ಹಿತಕಾಯುವಲ್ಲಿ ಶ್ರಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮಗಳಿಗೆ ಸಂಪೂರ್ಣ ಬೆಂಬಲ ನೀಡಲು ಒಕ್ಕೂಟ ತೀರ್ಮಾನಿಸಿದೆ.

ರ್ಯಾಪಿಡೋ ಬೈಕ್ ಟ್ಯಾಕ್ಸಿ ರದ್ದತಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.40 ಕೋಟಿ ರೂ. ವೆಚ್ಚದಲ್ಲಿ 2 ಇಂದಿರಾ ಕ್ಯಾಂಟೀನ್, ಅಸಂಘಟಿತ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ಅದಕ್ಕಾಗಿ ಹಣ ಒದಗಿಸಲು ವಿಧಾನಸಭೆಯಿಂದ ಒಪ್ಪಿಗೆ ಚಾಲಕರ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಧನಸಹಾಯ, ಅಗ್ರಿಗೇಟರ್ ಲೈಸನ್ಸ್ ಹೊಂದಿರುವ ಓಲಾ/ಊಬರ್ ಕಂಪನಿಗಳ ಡೈನಾಮಿಕ್ ದರ ರದ್ದು, ಹೀಗೆ ತಮ್ಮ 20 ಬೇಡಿಕೆಗಳನ್ನು ಅತ್ಯಲ್ಪ ಸಮಯದಲ್ಲಿ ಬಗೆಹರಿಸಿ, ಹಲವಾರು ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಗಳಿಗೆ ತಾರ್ಕಿಕ ಅಂತ್ಯ ಕಾಣಿಸುವಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಪ್ರಮುಖ ಪಾತ್ರವಹಿಸಿದ್ದಾರೆ.

ಪ್ರಮುಖ ಸಂಘಟನೆಗಳ ಮುಖಂಡರಾದ ಪೀಸ್ ಆಟೋ ಅಧ್ಯಕ್ಷ ರಘು, ಕರ್ನಾಟಕ ಚಾಲಕರ ಒಕ್ಕೂಟದ ಅಧ್ಯಕ್ಷ ಜಿ. ನಾರಾಯಣಸ್ವಾಮಿ, ಇಂಡಿಯನ್ ವೆಹಿಕಲ್ ಟ್ರೇಡ್ ಯುನಿಯನ್ ಅಧ್ಯಕ್ಷ ಸದಾನಂದ ಸ್ವಾಮಿ, ಭಾರತ್ ಟ್ರಾನ್ಸಪೊರ್ಟ್ ಅಸೋಸಿಯೇಷನ್ ಅಧ್ಯಕ್ಷ ಜಯಣ್ಣ, ಟ್ಯಾಕ್ಸಿ ಚಾಲಕರ ಸಂಘ ಹಾಗೂ ಇತರೆ 32 ಸಂಘಟನೆಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಸಚಿವ ರಾಂಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿ ಈ ವಿಷಯವನ್ನು ಘೋಷಣೆ ಮಾಡಿದ್ದಾರೆ.


Share It

You cannot copy content of this page