ರಾಜಕೀಯ ಸುದ್ದಿ

ಕೊನೆಗೂ ಬಂಧಿತ ದೆಹಲಿ ಸಿಎಂ ಕೇಜ್ರಿವಾಲ್ ಗೆ ಸಿಕ್ತು ಮಧ್ಯಂತರ ಜಾಮೀನು!

Share It

ನವದೆಹಲಿ: ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರಿಗೆ ಸುಪ್ರೀಂಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠವು ಮದ್ಯ ನೀತಿ ಹಗರಣದಲ್ಲಿ ತಿಹಾರ್ ಜೈಲಿನಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.

ಇದರಿಂದ ಕೊನೆಗೂ ತಿಹಾರ್ ಜೈಲಿನಲ್ಲಿ ಬಹಳ ದಿನಗಳವರೆಗೆ ಬಂಧಿತರಾಗಿದ್ದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಇಂದು ಬಿಡುಗಡೆಯ ಭಾಗ್ಯ ದೊರಕಲಿದೆ. ಇದರಿಂದ ದೇಶಾದ್ಯಂತ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸಂಭ್ರಮ ಆಚರಿಸಿ ಪರಸ್ಪರ ಸಿಹಿ ತಿನ್ನಿಸಿ ನಲಿದಾಡುತ್ತಿದ್ದಾರೆ.


Share It

You cannot copy content of this page