ಸುದ್ದಿ

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ ನೀಡಿ ಸುಪ್ರೀಂ ಐತಿಹಾಸಿಕ ಆದೇಶ

Waqf Act: Petitions filed in Supreme Court challenging its validity; hearing likely on 16th
Share It

ನವದೆಹಲಿ: ಒಂದು ದಶಕ ಕಾಲ ಕೋಮಾದಲ್ಲಿದ್ದ 32 ವರ್ಷದ ವ್ಯಕ್ತಿಗೆ ಸುಪ್ರೀಂಕೋರ್ಟ್ ಬುಧವಾರ ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಇದು ಸುಪ್ರೀಂ ಕೋರ್ಟ್‌ನ ಐತಿಹಾಸಿಕ ಆದೇಶವಾಗಿದೆ. ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.

ಹರಿಯಾಣದ 32 ವರ್ಷದ ವ್ಯಕ್ತಿ ಹರೀಶ್ ರಾಣಾ ಸುಮಾರು 13 ವರ್ಷಗಳಿಂದ ಚಲಿಸಲು ಅಥವಾ ಮಾತನಾಡಲು ಸಾಧ್ಯವಾಗದ ಸ್ಥಿತಿಯಲ್ಲಿದ್ದರು. ಹರೀಶ್ ಪೇಯಿಂಗ್ ಗೆಸ್ಟ್ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ದುರಂತ ಸಂಭವಿಸಿತ್ತು.

ಕುಟುಂಬಸ್ಥರು ಜೀವ ಉಳಿಸುವ ಚಿಕಿತ್ಸೆಯನ್ನು ನಿಲ್ಲಿಸುವ ದಯಾಮರಣಕ್ಕೆ ಕೋರಿ ಜ. 15ರಂದು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರದ ಪ್ರತಿನಿಧಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಮತ್ತು ಹರೀಶ್ ಅವರ ಕುಟುಂಬದ ಪರವಾಗಿ ಹಾಜರಾದ ವಕೀಲೆ ರಶ್ಮಿ ನಂದಕುಮಾರ್ವಾ ದ ಮಂಡಿಸಿದರು.

ಶಸ್ತ್ರಚಿಕಿತ್ಸೆ ಮೂಲಕ ಅಳವಡಿಸಿದ್ದ ಪಿಇಜಿ ಟ್ಯೂಬ್‌ಗಳ ಮೂಲಕ ನೀಡಲಾಗುವ ಕ್ಲಿನಿಕಲಿ ಅಡ್ಮಿನಿಸ್ಟರಿಡ್ ನ್ಯೂಟ್ರಿಷನ್ (ಸಿಎಎನ್) ನೆರವಿನಿಂದ ಮಾತ್ರ ಹರೀಶ್ ಜೀವಂತವಾಗಿದ್ದರು.


Share It

You cannot copy content of this page