ಉಪಯುಕ್ತ ರಾಜಕೀಯ ಸುದ್ದಿ

ರಾಜ್ಯಕ್ಕೆ ಬರ ಪರಿಹಾರ ಕೊಡದ ಕೇಂದ್ರಕ್ಕೆ ಸುಪ್ರಿಂ ತರಾಟೆ

Share It


ನವದೆಹಲಿ: ಬರ ಪರಿಹಾರ ನೀಡದ ಕೇಂದ್ರ ಸರಕಾರದ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರಕಾರಕ್ಕೆ ಗೆಲುವು ದೊರಕಿದ್ದು, ಸುಪ್ರಿಂ ಕೋರ್ಟ್‌ನಲ್ಲಿ ಕೇಂದ್ರ ಸರಕಾರಕ್ಕೆ ಹಿನ್ನಡೆಯಾಗಿದೆ.

ರಾಜ್ಯ ಸರಕಾರ ಸುಪ್ರೀ ಕೋರ್ಟ್‌ನಲ್ಲಿ ಸಲ್ಸಿಲಿದ್ದ ಅರ್ಜಿ ವಿಚಾರಣೆ ವೇಳೆ “ಕರ್ನಾಟಕಕ್ಕೆ ಬರ ಪರಿಹಾರ ನೀಡುವ ವಿಚಾರವಾಗಿ ಏಪ್ರಿಲ್ 29ರೊಳಗೆ ಸೂಕ್ತ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಲು ಚುನಾವಣಾ ಆಯೋಗವೂ ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಕೋರ್ಟ್ ಗೆ ಮಾಹಿತಿ ನೀಡಿದರು.

ಚುನಾವಣಾ ಆಯೋಗವು ಕೇಂದ್ರ ಸರಕಾರಕ್ಕೆ ಸಮಸ್ಯೆ ಪರಿಹರಿಸಲು ಅವಕಾಶ ನೀಡಿದೆ. ಮುಂದಿನ ಸೋಮವಾರದೊಳಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ಮಾಹಿತಿ ನೀಡಿದರು. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ-ಕೇಂದ್ರ ಸಕರ್ಾರಗಳು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಕಿವಿಮಾತು ಹೇಳಿದೆ. ಬಳಿಕ ಮುಂದಿನ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.

ಕನರ್ಾಟಕದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದು, “ಸಂಕಷ್ಟಕ್ಕೆ ತುತ್ತಾದ ಜನರಿಗೆ ಬರ ಪರಿಹಾರ ವಿತರಣೆ ಮಾಡಬೇಕು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (NDRF) ರಾಜ್ಯಕ್ಕೆ ಆರ್ಥಿಕ ನೆರವು ಬಿಡುಗಡೆಗೆ ತ್ವರಿತ ನಿರ್ಧಾರ ಕೈಗೊಳ್ಳಲು ಕೇಂದ್ರಕ್ಕೆ ನಿರ್ದೇಶಿಸಬೇಕು” ಎಂದು ಅವರು ವಾದಿಸಿದ್ದರು. “ರಾಜ್ಯ ಗಂಭೀರ ಮಾನವೀಯ ಸಂಕಷ್ಟ, ವಿಪತ್ತು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬರ ಪರಿಹಾರಕ್ಕಾಗಿ 35,162 ಕೋಟಿ ರೂಪಾಯಿಗಳನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಬೇಕು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಪ್ರಕಾರ, ಬರಗಾಲದ ಹಣಕಾಸಿನ ನೆರವು ಬಿಡುಗಡೆ ಮಾಡದಿರುವ ಕೇಂದ್ರ ಸರಕಾರದ ಕ್ರಮವು ರಾಜ್ಯದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆ” ಎಂದು ಕರ್ನಾಟಕ ವಾದಿಸಿತ್ತು.


Share It

You cannot copy content of this page