ಸುದ್ದಿ

ಟಿ-20 ವಿಶ್ವಕಪ್ ಕ್ರಿಕೆಟ್: ಕುತೂಹಲ ಕೆರಳಿಸಿರುವ ನಾಳಿನ‌ 2 ಸೆಮಿಫೈನಲ್ಸ್ ಪಂದ್ಯಗಳು

Share It

ಈ ಬಾರಿಯ 2024 ರ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿದಿದ್ದವು‌. ಇದೇ ಮೊದಲ ಬಾರಿಗೆ ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ದೇಶಗಳಲ್ಲಿ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ಈ ಬಾರಿ 20 ತಂಡಗಳು ಎ, ಬಿ, ಸಿ, ಡಿ ಹೀಗೆ 4 ಗುಂಪುಗಳಲ್ಲಿ ತಲಾ 4 ತಂಡಗಳಾಗಿ ಆಡಿದ್ದವು‌. ಹೀಗೆ ಪ್ರತಿ ಗುಂಪಿನಿಂದ ತಲಾ 2 ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಮೊದಲೆರಡು ಆದರೆ ಸ್ಥಾನ ಪಡೆದು ಸೂಪರ್-8 ಹಂತ ತಲುಪಿದ್ದವು.
ಲೀಗ್ ಹಂತದಲ್ಲಿ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್, ಬಾಂಗ್ಲಾದೇಶ, ಕೆನಡಾ, ಐರ್ಲೆಂಡ್, ನಮೀಬಿಯಾ, ನೇಪಾಳ, ನೆದರ್​ಲೆಂಡ್ಸ್, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಒಮಾನ್, ಪಪುವಾ ನ್ಯೂಗಿನಿಯಾ, ಸ್ಕಾಟ್ಲೆಂಡ್, ಶ್ರೀಲಂಕಾ, ಉಗಾಂಡ, ಕೆನಡಾ, ಅಮೆರಿಕಾ, ವೆಸ್ಟ್ ಇಂಡೀಸ್​ ತಂಡಗಳು ಗುಂಪಿನಲ್ಲಿ ಆಡಿದ್ದವು. ಆದರೆ ಪ್ರತಿ ಗುಂಪಿನಲ್ಲಿ ಅಗ್ರ ಸ್ಥಾನ ಪಡೆದ ಎರಡೆರಡು ತಂಡಗಳು ಅಂದರೆ ಒಟ್ಟು 16 ತಂಡಗಳು ಸೂಪರ್-8 ಹಂತ ತಲುಪಿದ್ದವು.
ತದನಂತರ ಸೂಪರ್-8 ಹಂತದಲ್ಲಿ ಎರಡು ಗುಂಪುಗಳಿಂದ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದ ತಲಾ ಎರಡೆರಡು ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ.
ಗುಂಪು-1 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಸೆಮಿಫೈನಲ್ ತಲುಪಿದರೆ, ಗುಂಪು-2 ರಿಂದ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ತಲುಪಿವೆ.

ಇದೀಗ ನಾಳೆ ಜೂನ್ 27 ಗುರುವಾರ ಭಾರತೀಯ ಕಾಲಮಾನ ಮುಂಜಾನೆ 6 ಗಂಟೆಯಿಂದ ಮೊದಲ ಸೆಮಿಫೈನಲ್ ಪಂದ್ಯ
ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ್ ತಂಡಗಳ ನಡುವೆ ನಡೆಯಲಿದೆ.

ಬಳಿಕ ನಾಳೆ ಜೂನ್ 27 ರ ರಾತ್ರಿ 8 ಗಂಟೆಯಿಂದ ನಡೆಯಲಿರುವ 2ನೇ ಸೆಮಿಫೈನಲ್ ಪಂದ್ಯದಲ್ಲಿ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆ.

ಟ್ರಿನಿಡಾಡ್​-ಟೊಬೊಗೊದ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 6 ಗಂಟೆಯಿಂದ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವೆ ನಡೆಯಲಿದೆ.

2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ವೆಸ್ಟ್ ಇಂಡೀಸ್ ದೇಶದ ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ
ಸೆಣಸಾಡಲಿವೆ. ಈ ಪಂದ್ಯವು ಭಾರತೀಯ ಕಾಲಮಾನ ನಾಳೆ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.
ಭಾರತ vs ಇಂಗ್ಲೆಂಡ್: ಜೂನ್ 27 ರಂದು ನಡೆಯಲಿರುವ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.
ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.

ಈ ಎರಡು ಸೆಮಿಫೈನಲ್​ ಪಂದ್ಯಗಳಲ್ಲಿ ಗೆಲ್ಲುವ ತಂಡಗಳು ಫೈನಲ್​ ನಲ್ಲಿ ಜೂನ್ 29 ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಅಂತಿಮ ಹಣಾಹಣಿಯಲ್ಲಿ ಪ್ರಶಸ್ತಿಗಾಗಿ ಸೆಣಸಾಡಲಿವೆ. ಈ ಫೈನಲ್ ಪಂದ್ಯದೊಂದಿಗೆ 9ನೇ ಆವೃತ್ತಿಯ ಟಿ-20 ವಿಶ್ವಕಪ್​ಗೆ ತೆರೆ ಬೀಳಲಿದೆ.
ಈ ಎರಡು ಸೆಮಿಫೈನಲ್​ನಲ್ಲಿ ಗೆಲ್ಲುವ ತಂಡಗಳು ಫೈನಲ್​ಗೆ ಪ್ರವೇಶಿಸಲಿದ್ದು, ಅದರಂತೆ ಜೂನ್ 29 ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ‌‌ ನಡೆಯಲಿರುವ ಫೈನಲ್ ಪಂದ್ಯದೊಂದಿಗೆ 9ನೇ ಆವೃತ್ತಿಯ ಟಿ20 ವಿಶ್ವಕಪ್​ಗೆ ತೆರೆ ಬೀಳಲಿದೆ.


Share It

You cannot copy content of this page