ಅಹಮದಾಬಾದ್: ಚೆನ್ನೈನಲ್ಲಿ ನಡೆಯಲಿರುವ ಟಾಟಾ ಐಪಿಎಲ್‌ನ ಫೈನಲ್ ಪಂದ್ಯವನ್ನಾಡುವ ಟಿಕೆಟ್ ಪಡೆಯಲು ಟೇಬಲ್ ಟಾಪರ್ ಗಳು ಸಜ್ಜಾಗಿದ್ದು, ಇಂದು ಜಿದ್ದಾಜಿದ್ದಿನ ಹಣಾಹಣಿ ನಡೆಯಲಿದೆ.
ಟಾಟಾ ಐಪಿಎಲ್ ನ ಮೊದಲ ಕ್ವಾಲಿಫೈಯರ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ರಾತ್ರಿ 7.30 ಕ್ಕೆ ನಡೆಯಲಿದೆ. ಅಂಕಪಟ್ಟಿಯ ಅಗ್ರಸ್ಥಾನಿಗಳಾದ ಕೊಲ್ಕತ್ತಾ ನೈಟ್ ರೈಡರ‍್ಸ್ ಮತ್ತು ಸನ್ ರೈಸರ‍್ಸ್ ಹೈದರಾಬಾದ್ ತಂಡುಗಳು ಸೆಣೆಸಾಟ ನಡೆಸಲಿವೆ.
ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡ ನೇರವಾಗಿ ಚೆನ್ನೈನ ಎಂ.ಎ. ಚಿದಂಬರ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆದುಕೊಳ್ಳಲಿದೆ. ಸೋತ ತಂಡಕ್ಕೆ ಕ್ವಾಲಿಫೈಯರ್ ಎರಡನೇ ಪಂದ್ಯದಲ್ಲಿ ಆಡುವ ಮತ್ತೊಂದು ಅವಕಾಶ ಸಿಗಲಿದೆ.
ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ರಾಜಸ್ತಾನ ರಾಯಲ್ಸ್ ಮತ್ತು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆವಿನ ಎಲಿಮೆನೇಟರ್ ಪಂದ್ಯದಲ್ಲಿ ಗೆದ್ದ ತಂಡದ ವಿರುದ್ಧ ಮತ್ತೊಂದು ಸೆಣೆಸಾಟ ನಡೆಸಬೇಕಾಗುತ್ತದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ, ಕ್ವಾಲಿಫೈಯರ್ 1 ರಲ್ಲಿ ಗೆದ್ದ ತಂಡದ ವಿರುದ್ಧ ಚೆನ್ನೈನಲ್ಲಿ ಫೈನಲ್ ಆಡಲಿದೆ.
ಕೊಲ್ಕತ್ತಾ ಮತ್ತು ಹೈದರಾಬಾದ್ ತಂಡಗಳು ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಬಲಿಷ್ಠ ತಂಡಗಳಾಗಿದ್ದು, ಕೊಲ್ಕತ್ತಾ ಲೀಗ್ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಷೇ ಸೋತು, 20 ಅಂಕ ಪಡೆದು ಅಂಕಪಟ್ಟಿಯ ಅಗ್ರಸ್ಥಾನಿಯಾಗಿತ್ತು. ಹೈದರಾಬಾದ್ ತಂಡ ಅಷ್ಟೇ ಪಂದ್ಯಗಳಲ್ಲಿ ಐದರಲ್ಲಿ ಸೋತು, ಎಂಟರಲ್ಲಿ ಜಯಗಳಿಸಿ, 17 ಅಂಕಗಳೊAದಿಗೆ ಎರಡನೇ ಸ್ಥಾನದಲ್ಲಿತ್ತು.
ಕೊಲ್ಕತ್ತಾ ತಂಡಕ್ಕೆ ಸುನೀಲ್ ನರೇನ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಆಧಾರವಾಗಿದ್ದರೆ, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರುö್ಯ ರಸೆಲ್‌ರಂತಹ ಸ್ಫೋಟಕ ಆಟಗಾರರಿದ್ದಾರೆ. ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ ಅವರ ಬಲವಿದೆ.
ಹೈದರಾಬಾದ್ ಬ್ಯಾಟಿಂಗ್‌ನಲ್ಲಿ ಸ್ಫೋಟಕ ಪಡೆಯನ್ನೇ ಹೊಂದಿದೆ. ಟ್ರಾವಿಸ್ ಹೆಡ್, ಅಭಿಶೇಕ್ ಶರ್ಮಾ, ಹೆನ್ರಿಚ್ ಕ್ಲಾಸನ್, ನಿತೀಶ್ ರೆಡ್ಡಿಯಂತಹ ಸಿಡಿಗುಂಡುಗಳಿದ್ದು, ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್, ನಾಯಕ ಪ್ಯಾಟ್ ಕಮಿನ್ಸ್ ಕಮಾಲ್ ಮಾಡಲಿದ್ದಾರೆ.