ಬಹುಮಹಡಿ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ
ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಹಾರಿ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಸೆಟ್ಸ್ ಅಪಾರ್ಟ್ಮೆಂಟ್ ನ ೧೩ ನೇ ಮಹಡಿಯಿಂದ ಹಾರಿ ಸಾಫ್ಟ್ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಸಂಪಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಕಚೇರಿಯಲ್ಲಿದ್ದ ಕಿರುಕುಳ ಅಥವಾ ಮನೆಯಲ್ಲಿನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವಬಹುದು ಎಂದು ಮೇಲ್ನೋಟಕ್ಕೆ ಕಂಡುಬAದಿದ್ದು, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಬಗ್ಗೆ ಇನ್ನಷ್ಟು ಮಾಹಿತಿಗಳು ತಿಳಿಯಬೇಕಿದೆ.


