ಹೈದರಾಬಾದ್ : ಬಾಂಬ್ ಸ್ಫೋಟಿಸುವ ಮೂಲಕ ಉಗ್ರ ಕೃತ್ಯ ನಡೆಸಲು ಸಂಚು ಹೂಡಿದ್ದ ಇಬ್ಬರು ಭಯೋತ್ಪಾದಕರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಮೋನಿಯಾ, ಸಲ್ಫರ್, ಅಲುಮಿನಿಯಂ ಪೌಡರ್ ಸೇರಿ ಬಾಂಬ್ ತಯಾರಿಕೆಗೆ ಬಳಸುತ್ತಿದ್ದ ಹಲವು ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಿರಾಜ್ ರೆಹಮಾನ್ (29) ಮತ್ತು ಸೈಯದ್ ಸಮೀರ್ (28) ಬಂಧಿತ ಆರೋಪಿಗಳು. ಇವರು ಸೌದಿ ಅರೇಬಿಯಾದ ಉಗ್ರ ಸಂಘಟನೆ ಐಸಿಸ್ ಜೊತೆ ಸಂಪರ್ಕ ಹೊಂದಿದ್ದರು.
ಆಂಧ್ರಪ್ರದೇಶ ಮತ್ತು ತೆಲಂಗಾಣ ಪೊಲೀಸರು ಹಮ್ಮಿಕೊಂಡಿದ್ದ ಜಂಟಿ ಕಾರ್ಯಾಚರಣೆಯಲ್ಲಿ ಇವರ ಸಂಚು ಬಯಲಾಗಿದೆ. ಇಬ್ಬರೂ ಸಧ್ಯಕ್ಕೆ ಪೊಲೀಸರ ವಶದಲ್ಲಿದ್ದು ಇಂದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುತ್ತಿದೆ.
ಪಹಲ್ಗಾಮ್ ದಾಳಿಯ ಬಳಿಕ ದೇಶದೊಳಗೆ ಕೆಲವರು ಉಗ್ರ ಕೃತ್ಯ ನಡೆಸಲು ಸಂಚು ಹೂಡಿದ್ದಾರೆಂದು ಕೇಂದ್ರ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪತ್ತೆ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.