ಕಲಬುರಗಿ: ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ ದಾಖಲಾಗಿರುವ ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಾ.ಉಮೇಶ್ ಜಾಧವ್ ಅವರು ಬಿಸಿಲಿನ ಝಳ ತಾಳಲಾರದೇ ರಸ್ತೆಯಲ್ಲೇ ಕುಸಿದುಬಿದ್ದ ಘಟನೆ ಬುಧವಾರ ನಡೆದಿದೆ.
ಕಲಬುರಗಿಯಲ್ಲಿ ವೀರಶೈವ- ಲಿಂಗಾಯತ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿದ್ದ ಜಾಗಕ್ಕೆ ಭೇಟಿ ನೀಡಿದ್ದ ಉಮೇಶ್ ಜಾಧವ್, ಬಿಸಿಲಿನ ತಾಪಕ್ಕೆ ತಲೆಸುತ್ತು ಬಂದು ರಸ್ತೆಯಲ್ಲಿಯೇ ಕುಸಿದು ಬಿದ್ದಿದ್ದಾರೆ.
ತಕ್ಷಣವೇ ಉಮೇಶ್ ಜಾಧವ್ ಅವರನ್ನು ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಬಳಿಕ ಮನೆಗೆ ಕಳುಹಿಸಿಕೊಡಲಾಗಿದೆ.