ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮ ಒಪ್ಪಿದ ಕಂಪನಿ

110
Share It


ನವದೆಹಲಿ: ಕೋವಿಶೀಲ್ಡ್ ಕರೋನಾ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದಿಂದ ರಕ್ತ ಹೆಪ್ಪುಗಟ್ಟುವಿಕೆಯಂತಹ ಸಮಸ್ಯೆಗಳು ಉಂಟಾಗುತ್ತಿರುವುದನ್ನು ಅಸ್ಟ್ರಜೆನೆಕಾ ಸಂಸ್ಥೆ ಒಪ್ಪಿಕೊಂಡಿದೆ.

ಬ್ರಿಟಿಷ್ ನ್ಯಾಯಾಲಯದ ಮುಂದೆ ಈ ಬಗ್ಗೆ ಸಂಸ್ಥೆ ಒಪ್ಪಿಕೊಂಡಿದ್ದು, ಲಸಿಕೆ ಪಡೆದವರಲ್ಲಿ ಅಪರೂಪಕ್ಕೆ ಮೆದುಳಿನಲ್ಲಿನ ರಕ್ತ ಹೆಪ್ಪುಗಟ್ಟುವಿಕೆಯಂತಹ ಸಮಸ್ಯೆ ಕಂಡುಬAದಿದೆ. ಆದರೆ, ನಮ್ಮ ಸಂಸ್ಥೆ ರೋಗಿಗಳ ಆರೋಗ್ಯದ ಬಗ್ಗೆ ಜಾಗೃತಿ ವಹಿಸುತ್ತದೆ ಎಂದು ಒಪ್ಪಿಕೊಂಡಿರುವುದಾಗಿ “ದ ಡೈಲಿ ಟೆಲಿಗ್ರಾಫ್” ವರದಿ ಮಾಡಿದೆ.

ಕೋವಿಶೀಲ್ಡ್ ಲಸಿಕೆಯನ್ನು ಅಸ್ಟ್ರಜೆನೆಕಾ-ಆಕ್ಸ್ಫರ್ಡ್ ಜಂಟಿಯಾಗಿ ಅಭಿವೃದ್ಧಿಪಡಿಸಿದ್ದು, ಭಾರತ ಸೇರಿ ಅನೇಕ ದೇಶಗಳಲ್ಲಿ ವಿತರಣೆ ಮಾಡಲಾಗಿತ್ತು, ಭಾರತದಲ್ಲಂತೂ ಈವರೆಗೆ ೮೦ ಕೋಟಿ ಜನರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ ಎಂದು ವರದಿಯಾಗಿದೆ. ಈ ಲಸಿಕೆಯ ಅಡ್ಡಪರಿಣಾಮದಿಂದ ಅನೇಕ ಲಸಿಕೆ ಪಡೆದವರು ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ, ಹೃದಯಾಘಾತದಂತಹ ಸಮಸ್ಯೆಯಿಂದ ಸಾವನ್ನಪ್ಪುತ್ತಿದ್ದಾರೆ ಎಂದು ವರದಿಗಳಾಗಿದ್ದವು. ಆದರೆ, ಈವರೆಗೆ ಇದೆಲ್ಲ ಸುಳ್ಳು ಎನ್ನುತ್ತಿದ್ದ ಸಂಸ್ಥೆ ಇದೀಗ ನಿಜ ಒಪ್ಪಿಕೊಂಡಿದೆ.

ಇದೀಗ ಸುಪ್ರೀಂ ಕೋರ್ಟ್ನಲ್ಲಿಯೂ ಈ ಬಗ್ಗೆ ಅರ್ಜಿ ಸಲ್ಲಿಕೆಯಾಗಿದ್ದು, ಕೋವಿಶೀಲ್ಡ್ ಲಸಿಕೆ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ಗೆ ವಕೀಲ ವಿಶಾಲ್ ತಿವಾರಿ ಬುಧವಾರ ಅರ್ಜಿ ಸಲ್ಲಿಸಿದ್ದಾರೆ. ಲಸಿಕೆಯ ದುಷ್ಪರಿಣಾಮಗಳ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಲು ಸೂಚನೆ ನೀಡಬೇಕು. ಲಸಿಕೆ ನಂತರ ಯಾರಿಗಾದರೂ ತೊಂದರೆಯಾದರೆ ಅವರಿಗೆ ಪರಿಹಾರ ನೀಡುವ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಭಾರತದಲ್ಲಿ ಅಸ್ಟ್ರಜೆನೆಕಾ ಲಸಿಕೆಯನ್ನು ಆಧಾರ್ ಪೂನಾವಾಲಾ ನೇತೃತ್ವದ ಕಂಪನಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದೆ. ಕೋವಿಶೀಲ್ಡ್ ಹೆಸರಿನಲ್ಲಿ ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು. ದೇಶದಲ್ಲಿ ಕೋಟ್ಯಂತರ ಜನರಿಗೆ ಈ ಲಸಿಕೆ ನೀಡಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಔಷಧಿ ತಯಾರಿಕಾ ಸಂಸ್ಥೆ, ಲಸಿಕೆಯಿಂದ ಉಂಟಾದ ‘ಅಪರೂಪದ ಅಡ್ಡ ಪರಿಣಾಮಗಳ’ ಕುರಿತಂತೆ ರೋಗಿಗಳ ಸುರಕ್ಷತೆಗೆ ನಮ್ಮ ಮೊದಲ ಆದ್ಯತೆ ಎಂದು ಹೇಳಿದೆ. “ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಅಥವಾ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರ ಬಗ್ಗೆ ನಮ್ಮ ಸಹಾನುಭೂತಿ ಇದೆ” ಎಂದು ಅಸ್ಟ್ರಜೆನಿಕಾ ವಕ್ತಾರರು ಹೇಳಿದ್ದಾರೆ.

ಇದೇ ವೇಳೆ, “ರೋಗಿಗಳ ಸುರಕ್ಷತೆಗೆ ನಾವು ಮೊದಲ ಆದ್ಯತೆ ನೀಡುತ್ತೇವೆ. ಕೋವಿಡ್ ಲಸಿಕೆ ಸೇರಿ ಎಲ್ಲಾ ಔಷಧಗಳ ಸುರಕ್ಷಿತ ಬಳಕೆ ಖಚಿತಪಡಿಸಿಕೊಳ್ಳಲು ಸ್ಪಷ್ಟ ಮತ್ತು ಕಠಿಣ ಮಾನದಂಡಗಳನ್ನು ಅನುಸರಿಸುತ್ತೇವೆ ಎಂದು ಹೇಳಿಕೊಂಡಿದೆ. ಅಸ್ಟ್ರಜೆನೆಕಾ ಕಂಪೆನಿ ಕೋವಿಡ್ ಲಸಿಕೆಯು ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್‌ನAತಹ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಬ್ರಿಟಿಷ್ ಹೈಕೋರ್ಟ್ನಲ್ಲಿ ಒಪ್ಪಿಕೊಂಡಿದೆ.

ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್‌ನಿAದಾಗಿ, ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಪ್ರಾರಂಭಿಸುತ್ತದೆ ಅಥವಾ ಪ್ಲೇಟ್‌ಲೆಟ್‌ಗಳು ದೇಹದಲ್ಲಿ ವೇಗವಾಗಿ ಕಡಿಮೆಯಾಗಲು ಪ್ರಾರಂಭಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದಾಗಿ ಮೆದುಳಿನ ಸ್ಟ್ರೋಕ್ ಆಗುವ ಅಪಾಯವೂ ಹೆಚ್ಚಾಗುತ್ತದೆ ಎಂದು ತಜ್ಞರು ಹೇಳುತ್ತಿದ್ದಾರೆ.


Share It

You cannot copy content of this page