ಉಪಯುಕ್ತ ಸುದ್ದಿ

ಅಕ್ರಮದ ಹಿನ್ನೆಲೆಯಲ್ಲಿ ಮುಂದೂಡಿದ್ದ ನೀಟ್ ಪಿಜಿ ಪರೀಕ್ಷೆ ಆಗಸ್ಟ್ 11 ಕ್ಕೆ ನಿಗದಿ

Share It

ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ಮುಂದೂಡಿಕೆಯಾಗಿದ್ದ ನೀಟ್ ಪಿಜಿ ಪರೀಕ್ಷೆಯನ್ನು ಮರುನಿಗದಿ ಮಾಡಿದ್ದು, ಆಗಸ್ಟ್ 11 ರಂದು ಪರೀಕ್ಷೆ ನಡೆಯಲಿದೆ.

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಬಲವಾದ ಆರೋಪ ಕೇಳಿಬಂದಿದೆ. ಈಗಲೂ ದೇಶಾದ್ಯಂತ ಹೋರಾಟಗಳು ನಡೆಯುತ್ತಿವೆ. ಲೋಕಸಭೆಯಲ್ಲಿ ವಿಪಕ್ಷಗಳು ನೀಟ್ ವಿಷಯದಲ್ಲಿ ಕೇಂದ್ರ ಸರಕಾರವನ್ನು ಹಣಿಯುತ್ತಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ನೀಟ್ ಪಿಜಿ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಲಾಗಿದೆ.

ಆ.೧೧ ರಂದು ಎರಡು ಪಾಳಿಯಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ. ನೀಟ್ ಪಿಜಿ ಪರೀಕ್ಷೆ ಜೂನ್ 23 ರಂದು ನಡೆಯಬೇಕಿತ್ತು. ಪಿಜಿ ಪರೀಕ್ಷೆಯಲ್ಲಿಯೂ ಅಕ್ರಮ ನಡೆಯುವ ಸಾಧ್ಯತೆಯ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿತ್ತು.

ಇದೀಗ ಆಗಸ್ಟ್ 11 ರಂದು ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷೆ ನಡೆಸುತ್ತೇವೆ. ಅದಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಎನ್‌ಟಿಎ ತಿಳಿಸಿದೆ.


Share It

You cannot copy content of this page