ಸಿನಿಮಾ ಸುದ್ದಿ

ಸಿನಿಮಾ ಆಗ್ತಿದೆ ಬಡವರ ಮಕ್ಳು ಬೆಳೀಬೇಕು ಕಣ್ರಯ್ಯಾ

Share It


ಬೆಂಗಳೂರು: ಡಾಲಿ ಧನಂಜಯ್ ಅವರ ಫೇಮಸ್ ಡೈಲಾಗ್ ಬಡವ್ರ ಮಕ್ಕಳು ಬೆಳೀಬೇಕು ಕಣ್ರಯ್ಯಾ ಡೈಲಾಗ್ ಇದೀಗ ಸಿನಿಮಾ ಆಗ್ತಿದೆ.

ಈ ಸಿನಿಮಾದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ನಲ್ಲಿ ಇತ್ತೀಚೆಗೆ ನೆರವೇರಿದೆ. ಬೆಂಗಳೂರು ಪೂರ್ವ ವಲಯದ ಡಿಸಿಪಿ ದೇವರಾಜ್ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಕನರ್ಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮಾ.ಹರೀಶ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ನಿದರ್ೇಶಕ ಮಂಜುಕವಿ ಮಾತನಾಡಿ, “ಡಾಲಿ ಅವರು ಹೇಳಿದ ಮಾತನ್ನು ಸ್ಫೂತರ್ಿಯಾಗಿಟ್ಟುಕೊಂಡು ಈ ಚಿತ್ರದ ಕಥೆ ಬರೆದಿದ್ದೇನೆ. ಬಡ ಕುಟುಂಬದಲ್ಲಿ ಹುಟ್ಟಿದ ಮಕ್ಕಳಿಗೆ ಎಷ್ಟೇ ಕಲೆ ಇದ್ದರೂ, ಚೆನ್ನಾಗಿ ಓದುವ ಹಂಬಲವಿದ್ದರೂ ಅವರನ್ನು ಬೆಳೆಸಲು ಯಾರೂ ಮುಂದೆ ಬರುವುದಿಲ್ಲ. ಅವರಲ್ಲಿರುವ ಪ್ರತಿಭೆ ಹಾಗೇ ನಶಿಸಿ ಹೋಗುತ್ತದೆ, ಹಾಗಾಗಬಾರದು. ಪ್ರತಿಭೆಯುಳ್ಳ ಬಡಮಕ್ಕಳ ಕೀತರ್ಿ ಬೆಳಗಬೇಕು. ಇದೇ ಚಿತ್ರದ ಕಥಾಹಂದರ. ಈ ಕಥೆ ಇಷ್ಟವಾಗಿ ಸಿ.ಎಸ್.ವೆಂಕಟೇಶ್ ನಿಮರ್ಾಣಕ್ಕೆ ಮುಂದಾಗಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.” ಎಂದರು.

ಚಿತ್ರದಲ್ಲಿ ಸುಚೇಂದ್ರ ಪ್ರಸಾದ್ ಹಾಗೂ ಸಂಗೀತ ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರ ಮಕ್ಕಳ ಪಾತ್ರದಲ್ಲಿ ರಾಜವರ್ಧನ್, ಲಾವಣ್ಯ ವೈಭವಿ ಅಭಿನಯಿಸುತ್ತಿದ್ದಾರೆ. ಫ್ರೆಂಡ್ಸ್ ವಾಸು, ಮೂಗೂರು ಸುರೇಶ್, ಚಂದ್ರಪ್ರಭ, ಚೈತ್ರಾ ಕೊಟ್ಟೂರು, ಮಂಜು ಪಾವಗಡ, ಚಿದಾನಂದ್, ಜಗದೀಶ್ ಕೊಪ್ಪ ಶಿವಾರೆಡ್ಡಿ ಸನತ್, ವಿನೋದ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ನಿದರ್ೇಶಕ ಮಂಜುಕವಿ ಸಂಗೀತ ನೀಡುತ್ತಿದ್ದಾರೆ. ತಂದೆ ಮಗಳ ಬಾಂಧವ್ಯದ ಹಾಡೊಂದನ್ನು ಅನುರಾಧ ಭಟ್ ಹಾಡಿದ್ದಾರೆ. ಹಿನ್ನೆಲೆ ಸಂಗೀತ ನೀಡುವುದರೊಂದಿಗೆ ವಿನು ಮನಸು ಪ್ರಮುಖಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ರೇಣುಕುಮಾರ್ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನ ಹಾಗೂ ಗಿರೀಶ್ ಸಾಕಿ, ಸಂಗೀತ ಶೆಟ್ಟಿ, ವಿಕ್ಟರ್ ದಯಾಳ್ ನಿದರ್ೇಶನದ ತಂಡದಲ್ಲಿದ್ದಾರೆ. ಶ್ರೀರಾಮ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿ.ಎಸ್.ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಸುಚೇಂದ್ರ ಪ್ರಸಾದ್, ಸಂಗೀತ ಶೆಟ್ಟಿ, ಫ್ರೆಂಡ್ಸ್ ವಾಸು, ಮೂಗೂರು ಸುರೇಶ್, ಜಗದೀಶ್ ಉಪಸ್ಥಿತರಿದ್ದರು


Share It

You cannot copy content of this page