ಬೆಂಗಳೂರು: ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ, ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದು, ಉತ್ತಮ ಆಡಳಿತ ಮಾಡುತ್ತಿದ್ದಾರೆ. ಹೀಗಾಗಿ, ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಸಿಎಂ ಹಾಗೂ ಡಿಸಿಎಂ ಹುದ್ದೆ ಕುರಿತ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಹುದ್ದೆ ರಾಜ್ಯದಲ್ಲಿ ಖಾಲಿಯಿಲ್ಲ. ಹೀಗಾಗಿ, ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ ಎಂದು ತಿಳಿಸಿದರು.
ಇನ್ನು ಡಿಸಿಎಂ ಹುದ್ದೆ ಹೆಚ್ಚಳ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ. ಇದು ಹೈಕಮಾಂಡ್ ತೆಗೆದುಕೊಳ್ಳಬೇಕಾದ ನಿರ್ಧಾರ. ಅದನ್ನು ಕೇಂದ್ರ ನಾಯಕರು ತೀರ್ಮಾನ ಮಾಡ್ತಾರೆ. ನಾವು ಹಾದಿ ಬೀದಿಯಲ್ಲಿ ಈ ಕುರಿತು ಮಾತನಾಡುವುದು ತಪ್ಪು ಎಂದರು.