ಬೆಂಗಳೂರು: ಪೆನ್ ಡ್ರೈವ್ ಕೇಸ್ ನಲ್ಲಿ ಸಂತ್ರಸ್ತೆ ಮಹಿಳೆಯನ್ನು ಅಪಹರಣ ಮಾಡಿದ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಷ್ಟದ ದಿನಗಳನ್ನು ನೂಕುತ್ತಿದ್ದಾರೆ.
ಈ ಮಧ್ಯೆ ಹೊಳಲ್ಕೆರೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬರುವ ಆಪ್ತರು ಮತ್ತು ಕುಟುಂಬದ ಸದಸ್ಯರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಅದೇನೆಂದರೆ ಇಂದು ಶುಕ್ರವಾರದಿಂದ 3 ದಿನಗಳ ಕಾಲ ಸರ್ಕಾರಿ ರಜೆ ಇರುವ ಕಾರಣ ಬಂಧಿತ ಶಾಸಕ ಎಚ್.ಡಿ.ರೇವಣ್ಣ ಅವರನ್ನು ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬರುವುದಕ್ಕೆ ಸಹ ಬ್ರೇಕ್ ಬಿದ್ದಿದೆ.
ಈಗಾಗಲೇ ಬಂಧಿತ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.